ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ಫೆ.1ರಂದು ಕೇಂದ್ರ ಬಜೆಟ್ ಮಂಡನೆ 

ನವದೆಹಲಿ:

        ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ  ದಿನಾಂಕ ನಿಗದಿ ಪಡಿಸಲಾಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ.

ಆ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.

ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು  ಜನವರಿ 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಅವರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.

ಇನ್ನು ಫೆಬ್ರವರಿ 1, 2022ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಮಾರ್ಚ್ 14ರಿಂದ ಬಜೆಟ್ ಅಧಿವೇಶನದ 2ನೇ ಭಾಗ ನಡೆದು, ಏಪ್ರಿಲ್ 8ರಂದು ಸಂಸತ್ ಬಜೆಟ್ ಅಧಿವೇಶ ಕೊನೆಗೊಳ್ಳಲಿದೆ ಎಂದು ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link