ಪ್ರಯಾಣಿಕರು ಮೊಬೈಲ್‌ನಲ್ಲಿ ರಾತ್ರಿ ಜೋರಾಗಿ ಮಾತಾಡುವಂತಿಲ್ಲ: ಭಾರತೀಯ ರೈಲ್ವೆ

ನವದೆಹಲಿ:

ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್‌ ಸ್ಪೀಕರ್‌’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ.ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶ|ದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ.ರೈಲಿನಲ್ಲಿರುವ ರೈಲ್ವೆ ತಪಾಸಣೆ ಸಿಬ್ಬಂದಿ, ಆರ್‌ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು ನಿರ್ವಹಣೆ ಸಿಬ್ಬಂದಿ ಈ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ರೈಲ್ವೆ ತಿಳಿಸಿದೆ.

ಕುತೂಹಲ ಮೂಡಿಸಿದೆ ಐಪಿಎಲ್ ಪ್ಲೇಆಫ್​ ರೇಸ್; ಹೀಗಿದೆ ಲೆಕ್ಕಾಚಾರ

ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರು ಮೊಬೈಲ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಷರತ್ತುಗಳ ನಡುವೆಯೂ 60 ವರ್ಷ ಮೇಲಿನ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಒಂಟಿ ಮಹಿಳಾ ಪ್ರಯಾಣಿಕರಿಗೆ ರೈಲ್ವೆ ಸಿಬ್ಬಂದಿ ಅಗತ್ಯ ನೆರವು ನೀಡುತ್ತಾರೆ.

ಹೊಸ ಮಾರ್ಗಸೂಚಿಗಳ ಕುರಿತು ರೈಲ್ವೆ ವಲಯ ಮಟ್ಟದಲ್ಲಿ, ಪ್ರಯಾಣಿಕರಿಗೆ ಜಾಗೃತಿ ಮೂಡಿಸಬೇಕು. ರೈಲಿನಲ್ಲಿ ಏರಿದ ಧ್ವನಿಯಲ್ಲಿ ಮೊಬೈಲ್‌ನಲ್ಲಿ ಮಾತನಾಡದಂತೆ ಹಾಗೂ ಇಯರ್‌ ಫೋನ್‌ ಇಲ್ಲದೆ ಸಂಗೀತ ಕೇಳದಂತೆ ಪ್ರಯಾಣಿಕರರಿಗೆ ಸಲಹೆಗಳನ್ನು
ಟಿಕೆಟ್‌ ಪರಿಶೀಲಕರು ಮತ್ತು ಇತರ ರೈಲ್ವೆ ಸಿಬ್ಬಂದಿ ನೀಡಬೇಕು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap