ಪಾಸ್ ಪೋರ್ಟ್ ಸೇವಾ ಪೋರ್ಟಲ್ ಆ. 29 ರಿಂದ ಸೆಪ್ಟೆಂಬರ್ 2ರವರೆಗೆ ಸ್ಥಗಿತ

ನವದೆಹಲಿ: 

   ಪಾಸ್‌ಪೋರ್ಟ್ ಸೇವಾ ಪೋರ್ಟಲ್ ನಾಳೆ ಆಗಸ್ಟ್ 29 ರಂದು ರಾತ್ರಿ 8 ರಿಂದ ಸೆಪ್ಟೆಂಬರ್ 2 ರಂದು ಬೆಳಗ್ಗೆ 6 ಗಂಟೆಯವರೆಗೆ ತಾಂತ್ರಿಕ ನಿರ್ವಹಣೆಗೆ ಕಾರಣದಿಂದ ನಾಗರಿಕರ ಸೇವೆಗೆ ಲಭ್ಯವಿರುವುದಿಲ್ಲ.

   ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್​ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ. ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್​ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್​ಡೇಟ್ ಮಾಡಲಾಗುತ್ತದೆ,’ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ. ದೃಢೀಕೃತ ಅಪಾಯಿಂಟ್‌ಮೆಂಟ್‌ಗಳನ್ನು ಹೊಂದಿರುವ ಅರ್ಜಿದಾರರು ತಮ್ಮ ಮರುನಿಗದಿಪಡಿಸಿದ ಅಪಾಯಿಂಟ್‌ಮೆಂಟ್‌ಗಳ ಕುರಿತು SMS ಅಧಿಸೂಚನೆಗಳನ್ನು ಸ್ವೀಕರಿಸುತ್ತಾರೆ.ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ದಾರಿಗಳ ಬಗ್ಗೆ ಎಸ್ಸೆಮ್ಮೆಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್​ಪೋರ್ಟ್ ಇಲಾಖೆ ಹೇಳಿದೆ.

   ಪಾಸ್​ಪೋರ್ಟ್ ಸೇವಾ ಪೋರ್ಟಲ್ ಮಾತ್ರವಲ್ಲ, ವಿವಿಧೆಡೆ ಇರುವ ಪಾಸ್​ಪೋರ್ಟ್ ಸೇವಾ ಕೇಂದ್ರಗಳೂ ಆಗಸ್ಟ್ 30ರಂದು ಬಂದ್ ಆಗಿರುತ್ತವೆ. ಹೀಗಾಗಿ, ಶುಕ್ರವಾರಕ್ಕೆ ಅಪಾಯಿಂಟ್ಮೆಂಟ್ ಪಡೆದಿರುವ ಅರ್ಜಿದಾರರಿಗೆ ಬೇರೆ ದಿನ ಅಪಾಯಿಂಟ್ಮೆಂಟ್ ಕೊಡಲಾಗುತ್ತಿದೆ.

Recent Articles

spot_img

Related Stories

Share via
Copy link
Powered by Social Snap