ಪಟಾಕಿ ಹೊಡೆಯುವ ಮುನ್ನ ಇದನ್ನು ಓದಿ …..!

ಬೆಂಗಳೂರು:

    ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿ ಯನ್ನು ಉಲ್ಲೇಖಿಸಿ ಈ ಸುತ್ತೋಲೆ ಹೊರ ಡಿಸಿರುವ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಎಲ್ಲ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳು ಕಡ್ಡಾಯ ವಾಗಿ ಅನುಸರಿಸಬೇಕು ಎಂದಿದೆ.

    ಸುಪ್ರೀಂ ಕೋರ್ಟ್‌ ಆದೇಶಗಳನ್ನು ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಧೀನ ಅಧಿಕಾರಿಗಳ ಗಮನಕ್ಕೆ ತಂದು, ಆದೇಶ ಪಾಲಿಸಲು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಕಾರ್ಯಪಡೆಗಳನ್ನು ರಚಿಸಿ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು. ಹಸಿರು ಪಟಾಕಿ ಹೊರತುಪಡಿಸಿ ಇತರ ಯಾವುದೇ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದರೆ ಗೋದಾಮು ಮುಟ್ಟಗೋಲು ಹಾಕಬೇಕು. ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್‌ ಮೊಕದ್ದೆಮೆ ಹೂಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

    ಎಲ್ಲ ಹಸಿರು ಪಟಾಕಿಗಳ ಮೇಲೆ ಮತ್ತು ಅವುಗಳ ಪ್ಯಾಕೆಟಿನ ಮೇಲೆ ಹಸಿರು ಪಟಾಕಿಯ ಚಿಹ್ನೆ ಮತ್ತು ಕ್ಯೂಆರ್ ಕೋಡ್‌ ಇರುತ್ತದೆ. ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಈ ಚಿಹ್ನೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿ ಆಗಿರುವುದಿಲ್ಲ. ಅವುಗಳನ್ನು ಮುಟ್ಟಗೋಲು ಹಾಕಬೇಕು. ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್‌ಗಳನ್ನು ರ‍್ಯಾಂಡಮ್‌ ಆಗಿ ಸಂಗ್ರಹಿಸಿ ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದದ ಮಟ್ಟ ಮಾಪನಕ್ಕೆ ಸೂಚಿಸಲಾಗಿದೆ.

   ಹೊರ ರಾಜ್ಯಗಳಿಂದ ನಿಷೇಧಿತ ಪಟಾಕಿ ಗಳನ್ನು ಸಾಗಣೆ ಮಾಡುತ್ತಿದ್ದರೆ ವಾಣಿಜ್ಯ ಇಲಾಖೆ ಮುಟ್ಟಗೋಲು ಹಾಕಿಕೊಳ್ಳಬೇಕು. ಪರಿಸರ ಸ್ನೇಹಿ ದೀಪಾವಳಿ ಆಚರಣೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap