ಶಿರಸಿ:
ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಹಾಗೂ ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ ಮತ್ತು ದತ್ತಿನಿಧಿ ಪುರಸ್ಕಾರ ಕಾರ್ಯಕ್ರಮವನ್ನು ಆ.೩೧ ರಂದು ನಗರದ ಟಿಆರ್.ಸಿ. ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೧೦.೩೦ ರಿಂದ ಆರಂಭವಾಗಲಿರುವ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದು, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ್ ಹಾಗೂ ವಿಶ್ವವಾಣಿ ಮತ್ತು ಪ್ರವಾಸಿ ಪ್ರಪಂಚ ಪತ್ರಿಕೆಯ ಪ್ರದಾನ ಸಂಪಾದಕ ವಿಶ್ವೇಶ್ವರ ಭಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಆಗಮಿಸಲಿದ್ದು, ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂದೇಶ ಭಟ್ ಬೆಳಖಂಡ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಧ್ಯಮ ಶ್ರೀ ಪ್ರಶಸ್ತಿಯನ್ನು ದೂರದರ್ಶನ ಹಾಗೂ ವಿಶ್ವವಾಣಿ ಜಿಲ್ಲಾ ವರದಿಗಾರ್ತಿ ವಿನುತಾ ಹೆಗಡೆಗೆ ನೀಡಲಾಗುತ್ತಿದ್ದು, ಗೋಲ್ಡನ್ ಪೆನ್ ಪುರಸ್ಕಾರಕ್ಕೆ ಯುವ ವರದಿಗಾರ ಮಂಜುನಾಥ ಈರಗೊಪ್ಪ ಅವರಿಗೆ ಪ್ರದಾನ ಮಾಡಲಾಗುತ್ತಿದೆ.








