ಪಾವಗಡ :
ಅತಿ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿದ ಪರಿಣಾಮ ಆಯಾ ತಪ್ಪಿ ಹಿಂಬದಿ ಸವಾರ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.
ತಾಲ್ಲೂಕಿನ ಶ್ರೀನಿವಾಸಪುರ ಗ್ರಾಮದ ನಬೀಸಾಬ್ (40) ಸಾವನ್ನಪ್ಪಿದ್ದು, ರಾಜಗೋಪಾಲ ಎಂಬುವವರ ಜೊತೆಯಲ್ಲಿ ದ್ವಿಚಕ್ರವಾಹನದಲ್ಲಿ ಭಾನುವಾರ ಪಾವಗಡ ಪಟ್ಟಣಕ್ಕೆ ಬರುತ್ತಿದ್ದರು.
ಅತಿವೇಗ, ಅಜಾಗರೂಕತೆಯಿಂದ ದ್ವಿಚಕ್ರ ವಾಹನವನ್ನು ಓಡಿಸಿದ ಪರಿಣಾಮ ಜಾಜೂರಾಯನ ಹಳ್ಳಿ ಸಮೀಪ ನಬೀಸಾಬ್ ಎಂಬುವರು ಬಿದ್ದು ಗಂಭೀರವಾಗಿ ಗೊಂಡಿದ್ದರು. ಇವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಪಾವಗಡ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
