ಬೆಂಗಳೂರು
ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಹುತೇಕ ಶಾಂತಿಯುತ ಮತದಾನ ನಡೆದಿದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಪ್ರವೀಮ್ ಸೂದ್ ಅವರು, ಮತಗಟ್ಟೆಯೊಳಗೆ ಮತದಾನಕ್ಕೆ ಅಡ್ಡಿಪಡಿಸಿದ ಒಂದೇ ಒಂದು ಘಟನೆ ನಡೆದಿಲ್ಲ, ಕೆಲವೆಡೆ, ಮತಗಟ್ಟೆಯ ಹೊರಗೆ ಸಣ್ಣಪುಟ್ಟ ಘರ್ಷಣೆಗಳು ನಡೆದಿರಬಹುದು. ಆದರೆ, ಅವುಗಳಿಂದ ಮತದಾನಕ್ಕೆ ಎಲ್ಲಿಯೂ ಸಮಸ್ಯೆಗಳಾಗಿಲ್ಲ ಎಂದು ಹೇಳಿದರು. ನಾಮನಿರ್ದೇಶನದಿಂದ ಮತದಾನದ ಅಂತಿಮ ದಿನದವರೆಗೆ ಪರಿಸ್ಥಿತಿ ಶಾಂತಿಯುತವಾಗಿತ್ತು ಎಂದು ತಿಳಿಸಿದರು.
ಇದೇ ವೇಳೆ ಮಸಬಿನಾಳ್ ಗ್ರಾಮದ ಗ್ರಾಮಸ್ಥರು ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಸಾಗಿಸುತ್ತಿದ್ದ ಚುನಾವಣಾ ಕರ್ತವ್ಯದ ವಾಹನವನ್ನು ತಡೆದು ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಮತಯಂತ್ರಗಳನ್ನು ಹಾನಿಗೊಳಪಡಿಸಿದ ಘಟನೆ ಕುರಿತು ಮಾತನಾಡಿ, ಮತದಾನ ನಿಲ್ಲಿಸಿ ಇವಿಎಂಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಜನರು ನಂಬಿದ್ದರು. ಹೀಗಾಗಿ ಘಟನೆ ನಡೆದಿದೆ. ಈ ಘಟನೆ ಸಂಬAಧ ಕೆಲವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ