ಗುಬ್ಬಿ : ವಿಚಿತ್ರ ರೀತಿಯ ಕೆಕ್ ಕತ್ತರಿಸಿ ಸುದ್ದಿಯಾದ ಯುವಕರು

ಗುಬ್ಬಿ:-

     ತಲ್ವಾರ್ ಎಂಬ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ತಾಲ್ಲೂಕಿನಾದ್ಯಂತ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

     ಗುಬ್ಬಿ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಯುವಕರಿಬ್ಬರು ಮಾರ್ಕೆಟ್ ರಸ್ತೆಯಲ್ಲಿ ಸ್ನೇಹಿತರೊಂದಿಗೆ ತನ್ನ ಹುಟ್ಟು ಹಬ್ಬವನ್ನು ತಲ್ವಾರ್ ಎಂಬ ಮಾರಕಾಸ್ತ್ರ ಹಿಡಿದು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡಿದ್ದು ಪಟ್ಟಣದ ಜನತೆಯಲ್ಲಿ ಭಯ ಹುಟ್ಟಿಸಿದೆ.

   ತುಮಕೂರು ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳು ನಡೆಯುತ್ತಿವೆ ಎಂಬ ಸುದ್ದಿ ಕೆಲ ದಿನಗಳಿಂದ ಸದ್ದು ಮಾಡುತ್ತಿರುವುದು ಒಂದೆಡೆಯಾದರೆ, ಗುಬ್ಬಿ ಪಟ್ಟಣದಲ್ಲಿ ಯಾವುದೇ ಕಾನೂನಿನ ಭಯವಿಲ್ಲದೆ ಯುವಕನೊಬ್ಬ ರೌಡಿಯ ರೀತಿ ತಲ್ವಾರ್ ಹಿಡಿದು ಬಾಸ್ ಎಂಬ ಕೇಕ್ ಕತ್ತರಿಸುವ ದೃಶ್ಯವನ್ನು ವಿಡಿಯೋ ಮಾಡಿ ಆತನ ಸ್ನೇಹಿತರು ತಮ್ಮ ಸ್ಟೇಟಸ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡು ಭಯದ ವಾತಾವರಣ ಸೃಷ್ಟಿಸಿರುವುದು ಮತ್ತೊಂದೆಡೆಯಾಗಿದೆ.

    ಗುಬ್ಬಿಯಲ್ಲಿ ಎಂದೂ ಈ ಮಟ್ಟದ ಹುಟ್ಟುಹಬ್ಬ ಆಚರಣೆ ಮಾಡಿದ್ದು ಕಂಡಿಲ್ಲ ಎನ್ನುವ ಅಲ್ಪ ಸಂಖ್ಯಾತರ ಸಮುದಾಯದ ಅವರದ್ದೇ ಜನ ಈ ಆಚರಣೆ ಬಗ್ಗೆ ಖಂಡಿಸುತ್ತಿದ್ದಾರೆ. ಜನುಮ ದಿನದ ಆಚರಣೆ ಎಂದೂ ಮಾಡದ ಸಮುದಾಯದ ಯುವಕರು ಒಗ್ಗೂಡಿ ಬಾಸ್ ಎಂಬ ಅಕ್ಷರದ ಕೇಕ್ ಕತ್ತರಿಸಲು ತಲ್ವಾರ್ ಬಳಸಿದ ಬಗ್ಗೆ ಪೊಲೀಸರು ಜಾಣ ಮೌನ ತಾಳಿದ್ದಾರೆ. ವಿಷಯ ತಿಳಿದು ಯುವಕರ ವಿಚಾರಣೆ ಮಾಡಿ ಪ್ರಭಾವಿಗಳ ಶಿಫಾರಸ್ಸಿಗೆ ಹಾಗೆಯೇ ಮರಳಿ ಕಳುಹಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿ ಬಂದಿದೆ

Recent Articles

spot_img

Related Stories

Share via
Copy link
Powered by Social Snap