ಜನತೆಯೇ ನನ್ನ ಪಾಲಿನ ಜನಾರ್ಧನರು : ಸಿಎಂ

ಬೆಂಗಳೂರು:

     ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಜನತೆಯೇ ನನ್ನ ಪಾಲಿನ ಜನಾರ್ಧನರು, ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಹೇಳಿದ್ದಾರೆ.  

    ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.   

    ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link