ಯಾವ ಪಕ್ಷಕ್ಕೆ ಮತ ನೀಡಬೇಕು ಎನ್ನುವುದು ಮತದಾರನಿಗೆ ಗೊತ್ತು: ವಿಜಯೇಂದ್ರ

ಬೆಂಗಳೂರು

      ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಮರಳಬೇಕೆಂಬ ಉದ್ದೇಶದಿಂದ ವಿವಿಧ ಮೋರ್ಚಾಗಳ ಸಮಾವೇಶವನ್ನು ಯಶಸ್ವಿಯಾಗಿ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

     ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲೂ ಎಲ್ಲ ಮೋರ್ಚಾಗಳ ಸಮಾವೇಶ ನಡೆಸಲು ಪಕ್ಷದ ವತಿಯಿಂದ ನನ್ನನ್ನು ಸಂಚಾಲಕರನ್ನಾಗಿ, ಜಗದೀಶ್ ಹಿರೇಮನಿ ಮತ್ತು ಯಶಪಾಲ್ ಅವರನ್ನು ಸಹ ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಇನ್ನೊಂದು ವಾರದಲ್ಲಿ ಪ್ರವಾಸದ ವಿವರವನ್ನು ತಿಳಿಸುತ್ತೇವೆ ಎಂದು ಅವರು ಹೇಳಿದರು.

    ಕೆಲವು ರಾಜಕೀಯ ಪಕ್ಷಗಳು ದಿವಾಳಿ ಆಗಿವೆ. ತಮ್ಮ ಸಾಧನೆ ಏನು? ಜನರಿಗೆ ಏನು ಹೇಳಬೇಕು ಎಂಬ ಗೊಂದಲದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸುಳ್ಳು ಹೇಳಿಕೆ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ. ಇದು ಆ ಪಕ್ಷದ ನಾಯಕರಿಗೆ ಶೋಭೆ ತರುವುದಿಲ್ಲ ಎಂದರು.

   ಯಾವ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತಂದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂಬುದನ್ನು ರಾಜ್ಯದ ಪ್ರಜ್ಞಾವಂತ ಮತದಾರರು ಅರಿತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಏನೇ ಹೇಳಿಕೆ ಕೊಟ್ಟರೂ ರಾಜ್ಯದ ಪ್ರಜ್ಞಾವಂತ ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link