ಆಕರ್ಷಕ ಬೆಲೆ ಕಂಡು ಕಾರ್‌ ಷೋರೂಂ ಮುಂದೆ ಕ್ಯೂ ನಿಂತ ಜನ : ಆ ಕಾರಾದ್ರು ಯಾವುದು….?

ನವದೆಹಲಿ :

    ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಮಹೀಂದ್ರಾ (Mahindra) ಗುರುತಿಸಿಕೊಂಡಿದೆ. ಕಂಪನಿಯು ಈ ಫೆಬ್ರವರಿ ತಿಂಗಳು ಪೂರೈಸಬೇಕಾದ ಕಾರು (open booking)ಗಳ ಕುರಿತ ಅಂಕಿಅಂಶದ ವಿವರವನ್ನು ಪ್ರಕಟಿಸಿದ್ದು, ಸ್ಕಾರ್ಪಿಯೋ (Scorpio) ಸರಣಿ ಎಸ್‌ಯುವಿಗಳು ಗ್ರಾಹಕರಿಂದ ದೊಡ್ಡ ಮಟ್ಟದಲ್ಲಿ ಬೇಡಿಕೆಯನ್ನು ಪಡೆದುಕೊಂಡಿವೆ.

    ಸದ್ಯ ದೊರೆತ್ತಿರುವ ಮಾಹಿತಿ ಪ್ರಕಾರ, ಮಹೀಂದ್ರಾ ಒಟ್ಟು 2,25,800 ಎಸ್‌ಯುವಿಗಳನ್ನು ವಿತರಣೆ ಮಾಡಬೇಕಾಗಿದೆ. ಅದರಲ್ಲಿ ಸ್ಕಾರ್ಪಿಯೋ ಎನ್ ಹಾಗೂ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಗಳೇ ಅಧಿಕ ಪಾಲನ್ನು ಹೊಂದಿದ್ದು, 1.01 ಲಕ್ಷ ಕಾರುಗಳನ್ನು ಪೂರೈಸಬೇಕಾಗಿದೆ. ಈಗಾಲೂ ಇವೆರೆಡು ಆವೃತ್ತಿಗಳಿಗೆ ಭಾರೀ ಡಿಮ್ಯಾಂಡ್ ಇದ್ದು, ಪ್ರತಿ ತಿಂಗಳು 16,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆಯುತ್ತಿವೆ.   

    ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ರೂ.13.60 ಲಕ್ಷದಿಂದ ರೂ.24.54 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಝಡ್2, ಝಡ್4, ಝಡ್6, ಝಡ್8 ರೂಪಾಂತರ ಮತ್ತು ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.

    ಈ ಮಹೀಂದ್ರಾ ಸ್ಕಾರ್ಪಿಯೋ ಎನ್ 2.2-ಲೀಟರ್ ಡೀಸೆಲ್ ಮತ್ತು 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್‌ ಬಾಕ್ಸ್‌ನ್ನು ಪಡೆದಿದ್ದು, 2WD (ಟೂ ವೀಲ್ ಡ್ರೈವ್) 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ವಿನ್ಯಾಸದಲ್ಲಿಯೂ ಅತ್ಯುತ್ತಮವಾಗಿದ್ದು, 6, 7 ಆಸನ (ಸೀಟ್)ದೊಂದಿಗೆ ದೊರೆಯುತ್ತದೆ. 

    ಸ್ಕಾರ್ಪಿಯೋ ಎನ್ ಎಸ್‌ಯುವಿ, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಫ್ರಂಟ್ & ರೇರ್ ಕ್ಯಾಮೆರಾ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸಿಂಗಲ್-ಪೇನ್ ಸನ್‌ರೂಫ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಪಡೆದಿದೆ.

    ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ರೂ.13.59 ಲಕ್ಷದಿಂದ ರೂ.17.35 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. ಎಸ್ (S) ಮತ್ತು ಎಸ್11 (S11) ರೂಪಾಂತರ ಮತ್ತು ಗ್ಯಾಲಕ್ಸಿ ಗ್ರೇ, ಮೊಲ್ಟೆನ್ ರೆಡ್ ರೇಜ್ ಒಳಗೊಂಡಂತೆ ವಿವಿಧ ಬಣ್ಣಗಳನ್ನು ಹೊಂದಿದೆ. ಜೊತೆಗೆ 7, 9 ಆನಸ ವ್ಯವಸ್ಥೆಯಲ್ಲಿ ಲಭ್ಯವಿದೆ.

    ಈ ಸ್ಕಾರ್ಪಿಯೋ ಕ್ಲಾಸಿಕ್ ಕಾರು ಕೇವಲ 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 132 ಪಿಎಸ್ ಗರಿಷ್ಠ ಪವರ್ ಮತ್ತು 300 ಎನ್‌ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.

    ಸ್ಕಾರ್ಪಿಯೋ ಕ್ಲಾಸಿಕ್, 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲ್‌ಇಡಿ, ಡಿಆರ್‌ಎಲ್‌, ಪ್ರೊಜೆಕ್ಟರ್ ಹೆಡ್‌ಲೈಟ್‌, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap