ಶೇ. 50 ರ ಮಿತಿ, ನೈಟ್ ಕರ್ಫ್ಯೂ ನಿರ್ಬಂಧ ಸಡಿಲಿಕೆ ಬಗ್ಗೆ ನಿರ್ಧಾರ

ಬೆಂಗಳೂರು:

 ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆ ಇರುವುದರಿಂದ ರಾಜ್ಯದಲ್ಲಿ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

     ಶೇಕಡ 50 ರ ಮಿತಿ ನಿರ್ಬಂಧ ಸಡಿಲಿಕೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು. ಇದರೊಂದಿಗೆ ನೈಟ್ ಕರ್ಫ್ಯೂ ಸಮಯ ಬದಲಾವಣೆ, ಕರ್ಫ್ಯೂ ಮುಂದುವರಿಕೆ, ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿ ಆರಂಭ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸುವ ಸಾಧ್ಯತೆ ಇದೆ.

ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಶಾಲೆ ತೆರೆಯಲು ಶಿಫಾರಸು ಮಾಡಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಈಜುಕೊಳ, ಜಿಮ್, ಹೋಟೆಲ್, ಬಾರ್, ರೆಸ್ಟೋರೆಂಟ್, ಸಭಾಂಗಣಗಳಲ್ಲಿ ಶೇಕಡ 50 ರ ಮಿತಿ ಸಡಿಲಿಕೆ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ನೈಟ್ ಕರ್ಫ್ಯೂ ಮುಂದುವರಿಕೆ ಇಲ್ಲವೇ ಸಮಯ ಬದಲಾವಣೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link