ರಾಜ್ಯ ಮಟ್ಟದ ಕನಕ ಪ್ರತಿಭಾ ಪುರಸ್ಕಾರ : ಸಿಎಂ ಭಾಗಿ

ಬೆಂಗಳೂರು :

     ಶ್ರೀ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದಿಂದ ಬೆಂಗಳೂರಿನ ಚಂದ್ರಾ ಲೇ ಔಟ್‌ನಲ್ಲಿ ಇಂದು ಸೋಮವಾರ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.

     ಇದೇ ಸಂದರ್ಭದಲ್ಲಿ ಎನ್.ಐ.ಟಿಯಲ್ಲಿ ದೇಶಕ್ಕೆ ಮೂರನೇ ಸ್ಥಾನ ಪಡೆದಿರುವ ಆಶೀನ್ ನರೇಸ್ ಅರಸು, ರಾಷ್ಟ್ರೀಯ ಯೋಗಪಟು ಎಸ್. ಬೆನಕರಾಜು, ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದಿರುವ ಕೆ. ವೀಕ್ಷಿತ್ ಅವರಿಗೆ ಕನಕಚೇತನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

    ಕಾಗಿನೆಲೆ ಕ್ಷೇತ್ರದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾ ಸ್ವಾಮೀಜಿ ಅವರು ಈ ಕುರಿತು ಮಾಹಿತಿ ನೀಡಿ, 20 ವರ್ಷಗಳ ಹಿಂದೆ ಹೊಸದುರ್ಗ ಮಠದಲ್ಲಿ 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿತ್ತು. ಈ ಕಾರ್ಯಕ್ರಮ ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದು, ಇದೀಗ ಬೆಂಗಳೂರಿನ ಶಾಖೆಯಲ್ಲಿ 700ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದೆ ಎಂದರು.

     ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಪ್ರಿಯಾ ಕೃಷ್ಣ, ಬಿ.ಜಿ. ಗೋವಿಂದಪ್ಪ, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಆರ್. ಕೃಷ್ಣಪ್ಪ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಕೊಪ್ಪಳ ವಿಶ್ವವಿದ್ಯಾನಿಲಯ ಕುಲಪತಿ ಡಾ.ಬಿ.ಕೆ. ರವಿ, ಇನ್‌ಸೈಡ್ ವ್ಯವಸ್ಥಾಪಕ ನಿರ್ದೇಶಕ ಜಿ.ಬಿ ವಿನಯ್‌ಕುಮಾರ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap