ಬೆಂಗಳೂರು:
ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಈ ನಡುವೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.
ಅರ್ಜಿದಾರ ಡಾ.ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಶುಕ್ರವಾರ ಮುಸ್ಲಿಮರಿಗೆ ಅತ್ಯಂತ ಮಂಗಳಕರ ದಿನವಾದ ಸಮಯದಲ್ಲಿ ಹಾಗೂ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ