ಬೆಂಗಳೂರು:
ಬಿಟಿಎಂ ಲೇಔಟ್ 1ನೇ ಹಂತದ ನಿವಾಸಿ ಸೈಯದ್ ಶಫಿ ಎಂಬಾತ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ, ಈ ವೇಳೆ ಕಾನ್‌ಸ್ಟೆಬಲ್ ಸಿದ್ದರಾಮೇಶ್ವರ ಕೌಜಲಗಿ ಆತನ ಫೋಟೊ ತೆಗೆಯುತ್ತಿದ್ದರು. ಇದನ್ನು ಕಂಡು ಆಕ್ರೋಶಗೊಂಡ ಆರೋಪಿ ಅವರ ಕೈ ಬೆರಳಪ ಕಚ್ಚಿದ್ದಾನೆ. ಜೊತೆಗೆ ಕಾನ್‌ಸ್ಟೆಬಲ್‌ನ ಮೊಬೈಲ್ ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಹೆಡ್ ಕಾನ್‌ಸ್ಟೆಬಲ್ ತಮ್ಮ ಸಹೋದ್ಯೋಗಿಯೊಂದಿಗೆ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಲ್ಮೆಟ್ ಹಾಕದೇ ವಾಹನ ಚಲಾಯಿಸಿದ್ದನ್ನು ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಕ್ಕೆ ಕೋಪಗೊಂಡ ವಾಹನ ಸವಾರ ಟ್ರಾಫಿಕ್ ಕಾನ್‌ಸ್ಟೆಬಲ್ ಕೈ ಬೆರಳು ಕಚ್ಚಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನ ಸವಾರನನ್ನು ಬಂಧಿಸಿದ್ದಾರೆ.
ದ್ವಿಚಕ್ರ ವಾಹನವನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪಿ ಶಫಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ . ನಂಬರ್ ಪ್ಲೇಟ್ ಬಿಚ್ಚಿಕೊಡುತ್ತೇನೆ, ಎಷ್ಟು ಕೇಸ್ ಹಾಕೊಳ್ತೀಯಾ ಹಾಕ್ಕೋ ಎಂದು ಏಕವಚನದಲ್ಲೇ ನಿಂದಿಸಿ ಕಾನ್‌ಸ್ಟೆಬಲ್ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ