ಬೆಂಗಳೂರು:
ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಗುರುವಾರ ನಡೆದಿದೆ. ಮಧ್ಯಾಹ್ನ 2-10 ನಿಮಿಷದಲ್ಲಿ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಮೆಟ್ರೋ ರೈಲಿನ ಅಡಿಯಲ್ಲಿ ಸಿಲುಕಿರುವ ಶವವನ್ನು ಹೊರ ತೆಗೆಯಲು ಅಧಿಕಾರಿಗಳು ಹರಸಾಹಸ ನಡೆಸುತ್ತಿದ್ದಾರೆ.
ಚಂದ್ರಲೇಔಟ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಿಎಂಆರ್ ಸಿಎಲ್ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದು ಮಹಜರು ನಡೆಸುತ್ತಿರುವುದರಿಂದ ಮಾಗಡಿ ರಸ್ತೆಯಿಂದ ಚಲ್ಲಘಟ್ಟ ನಡುವಿನ ಮಾರ್ಗದಲ್ಲಿ ತಾತ್ಕಾಲಿಕವಾಗಿ ರೈಲ್ವೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.