ಹಾಸನ:
ಹೊಳೆನರಸೀಪುರ ಪಟ್ಟಣದ ಅರಣ್ಯ ಕಛೇರಿ ಬಳಿಯ ಅಂಗಡಿಯೊಂದರಲ್ಲಿ ಈ ಘಟನೆ ಸಂಭವಿಸಿದೆ. ವಿರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತುಕೊಂಡು ಮೊಬೈಲ್ನಲ್ಲಿ ಫೋನ್ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೊಳಗಾಗಿದ್ದು, ನೋಡು ನೋಡುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ.
ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. 40 ವರ್ಷದ ವಿರೂಪಾಕ್ಷ ಹೃದಯಾಘಾತಕ್ಕೊಳಗಾದ ವ್ಯಕ್ತಿ. ಹೃದಯಾಘಾತಕ್ಕೆ ಒಳಗಾದ ಅಂತಿಮ ಕ್ಷಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೋಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ ಮೆಡಿಕಲ್ ನಡೆಸುತ್ತಿದ್ದರು. ಜತೆಗೆ ಸಮಾಜಸೇವೆಯಲ್ಲಿಯೂ ಗುರುತಿಸಿಕೊಂಡಿದ್ದರು. ಹಠಾತ್ ಕುಸಿದು ಬೀಳುತ್ತಿದ್ದಂತೆ ಸ್ಥಳದಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದನ್ನು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ