ದೇಶಾದ್ಯಂತ `ಹಲಾಲ್ ಉತ್ಪನ್ನ’ ನಿಷೇಧ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ

ನವದೆಹಲಿ :

ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು  ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.ದೇಶದಲ್ಲಿ 15% ಮಾತ್ರ ಇರುವ ಮುಸ್ಲಿಂ ಅಲ್ಪಸಂಖ್ಯಾತರಿಗೆ ಹಲಾಲ್ ಆಹಾರ ಬೇಕು ಎಂಬ ಕಾರಣಕ್ಕೆ85% ಇರುವ ಇತರ ಜನಾಂಗಗಳ ಬಹುಸಂಖ್ಯಾತರ ಮೇಲೆ ಹಲಾಲ್ ಉತ್ಪನ್ನಗಳನ್ನು ಹೇರಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ವಕೀಲ ವಿಭೋರ್ ಆನಂದ್ ಎಂಬುವರು ಹಲಾಲ್ ಉತ್ಪನ್ನಗಳನ್ನು ಹಾಗೂ ಹಲಾಲ್ ಪ್ರಮಾಣೀಕರಣವನ್ನು ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದು ಸಂವಿಧಾನ 14 ಹಾಗೂ 21 ನೇ ವಿಧಿಯ ಉಲ್ಲಂಘನೆಯಾಗಿದೆ.

ಇಂದಿನ ಪಂದ್ಯದಲ್ಲಿ RCB – SRH ಮುಖಾಮುಖಿ

ದೇಶದಲ್ಲಿ 1974 ರಲ್ಲಿ ಹಲಾಲ್ ಪ್ರಮಾಣೀಕರಣ ವ್ಯವಸ್ಥೆ ಆರಂಭವಾಗಿದ್ದು,ಮೊದಲಿಗೆ ಇದು ಮಾಂಸದ ಉತ್ಪನ್ನಗಳಿಗೆ ಸೀಮಿತವಾಗಿತ್ತು. ಈಗ ಫಾರ್ಮಾಸ್ಯುಟಿಕಲ್ಸ್. ಕ್ಯಾಸ್ಮೆಟಿಕ್ಸ್, ಆರೋಗ್ಯ ಉತ್ಪನ್ನಗಳು, ವೈದ್ಯಕೀಯ ಉಪಕರಣಗಳಿಗೂ ಪ್ರಮಾಣೀಕರಣ ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link