ತುಮಕೂರು:
ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ನಾಲ್ಕೈದು ದಿನಗಳಲ್ಲಿ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ, ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ.
ಯಾರು ಜಿಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ, ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು.
ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಳವಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಚೇರ್ ಖಾಲಿ ಇಲ್ಲ ಎಂದರು.