ಹಿಜಾಬ್‌, ಬುರ್ಕಾ ತೆಗೆಯುವ ದೃಶ್ಯ ಸೆರೆ ಹಿಡಿಯದಂತೆ ಮಾಧ್ಯಮಗಳ ವಿರುದ್ದ ಹೈಕೋರ್ಟ್’ಗೆ ಪಿಐಎಲ್

ಬೆಂಗಳೂರು:

ಹಿಜಾಬ್‌ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿಗಳ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವವರೆಗೆ ಶಾಲೆಯ ಬಳಿ ವಿದ್ಯಾರ್ಥಿನಿಯರು ಮತ್ತು ಬೋಧಕರು ಹಿಜಾಬ್‌ ಮತ್ತು ಬುರ್ಕಾ ತೆಗೆಯುವುದನ್ನು ವಿಡಿಯೊ ಮಾಡುವುದು,

ಫೋಟೊ ತೆಗೆಯದಂತೆ 70 ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಸಲಾಗಿದೆ.

    ಅಬ್ದುಲ್‌ ಮನ್ಸೂರ್‌, ಮೊಹಮ್ಮದ್‌ ಖಲೀಲ್‌ ಹಾಗೂ ಆಸೀಫ್‌ ಅಹ್ಮದ್‌ ಅವರು ವಕೀಲ ಎಸ್‌ ಬಾಲಕೃಷ್ಣನ್‌ ಅವರ ಮೂಲಕ ಸಲ್ಲಿಸಿರುವ ಮನವಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ಅರ್ಜಿಯನ್ನಿ ಹಿಜಾಬ್‌ಗೆ ಸಂಬಂಧಿಸಿದಂತೆ ಪ್ರಕರಣಗಳ ಜೊತೆ ಸೇರಿಸಲು ಪೀಠವು ಆದೇಶ ಮಾಡಿದೆ.ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ಬೋಧಕರ ವಿಡಿಯೊ ಮತ್ತು ಫೋಟೊ ಸೆರೆ ಹಿಡಿಯುವುದು ಮತ್ತು ನಿರಂತರವಾಗಿ

ಅದನ್ನು ಪ್ರಸಾರ ಮಾಡುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿರುವ ಈ ಮನವಿಯಲ್ಲಿ ರಾಜ್ಯ ಸರ್ಕಾರದ ಗೃಹ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳನ್ನು ಮೊದಲ ಮತ್ತು ಎರಡನೇ ಪ್ರತಿವಾದಿಗಳನ್ನಾಗಿಸಲಾಗಿದೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link