ಪ್ಲಾಸ್ಟಿಕ್‌ ಮ್ಯಾಟ್‌ ಅಂಗಡಿಯಲ್ಲಿ ಅಗ್ನಿ ದುರಂತ, ಒಬ್ಬ ಸಾವು

ಬೆಂಗಳೂರು:

    ಇಂದು ಬೆಂಗಳೂರಲ್ಲಿ ನಸುಕಿನ ಜಾವ 3:30ಕ್ಕೆ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಒಬ್ಬ ಸಜೀವ ದಹನಗೊಂಡಿದ್ದಾನೆ. ಬೆಂಗಳೂರಿನ ನಗರತ್ ಪೇಟೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಮೂವರು ಅಂಗಡಿಯೊಳಗೆ ಸಿಲುಕಿರುವ ಅಥವಾ ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ನಗರತ್ ಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಈ ಅಗ್ನಿ ಅವಘಡ ತಡರಾತ್ರಿ ಸಂಭವಿಸಿದ್ದು, ಅಂಗಡಿಯೊಳಗೆ ನಿದ್ರಿಸಿದ್ದ ಐದಕ್ಕೂ ಹೆಚ್ಚು ಕೆಲಸಗಾರರು ಇದರಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

   ಪ್ಲಾಸ್ಟಿಕ್‌ ಅಂಗಡಿಯೊಳಗೆ ರಾತ್ರಿ ಕೆಲಸಗಾರರು ಮಲಗಿ ನಿದ್ರಿಸಿರುವಾಗ ಬೆಂಕಿ ಹೊತ್ತಿಕೊಂಡಿದೆ. ತೀವ್ರ ದಹನಕಾರಿ ವಸ್ತುಗಳು ಅಂಗಡಿಯಲ್ಲಿ ಇದ್ದುದರಿಂದ ಬೆಂಕಿ ಶೀಘ್ರವಾಗಿ ವ್ಯಾಪಿಸಿದೆ. ಮಾಹಿತಿ ದೊರೆತ ಕೂಡಲೆ ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಕಾರ್ಯನಿರತವಾಗಿವೆ. ಮೃತಪಟ್ಟವರ ವಿವರಗಳು ದೊರೆತಿಲ್ಲ. ಅಂಗಡಿ ಮಾಲಿಕರನ್ನು ಪತ್ತೆ ಹಚ್ಚಲಾಗುತ್ತಿದೆ. ಶಾರ್ಟ್‌ ಸರ್ಕಿಟ್‌ನಿಂದ ಹೀಗಾಗಿರಬಹುದು ಎನ್ನಲಾಗಿದ್ದು, ಸುರಕ್ಷತಾ ಕ್ರಮಗಳ ಗೈರುಹಾಜರಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

Recent Articles

spot_img

Related Stories

Share via
Copy link