ಬೆಂಗಳೂರು :
ರೌಡಿಶೀಟರ್ ಫೈಟರ್ ರವಿ ಮುಂದೆ ಪ್ರಧಾನಿ ಮೋದಿ ಕೈ ಮುಗಿದು ನಿಂತಿದ್ದ ವಿಚಾರ ಕುರಿತಂತೆ ಕೇಂದ್ರ ಸಚಿವೆ ಶೋಭ ಕಾರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೈಟರ್ ರವಿ ಯಾರೆಂಬುದು ಪ್ರಧಾನಿ ಮೋದಿಗೆ ಗೊತ್ತಿರಲಿಲ್ಲ. ಇದಕ್ಕೆ ಮೋದಿ ಜವಾಬ್ದಾರರಲ್ಲ. ಸ್ವಾಗತ ಕೋರುವವರ ಪಟ್ಟಿಯಲ್ಲಿ ಫೈಟರ್ ರವಿ ಹೆಸರು ಹೇಗೆ ಬಂತು ಎಂದು ಪರಿಶೀಲನೆ ನಡೆಸುತ್ತೇವೆ. ಪ್ರಧಾನಿ ಮೋದಿಗೆ ಫೈಟರ್ ರವಿ ಸ್ವಾಗತ ಕೋರಿರುವುದು ಲೋಪವಾಗಿದೆ. ಸ್ವಾಗತ ಕೋರುವವರ ಪಟ್ಟಿಯನ್ನು ಮೋದಿ ಮೊದಲೇ ಗಮನಿಸಲಿಲ್ಲ ಎಂದು ಹೇಳಿದ್ದಾರೆ.
ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತಂತೆ ಪ್ರತಿಕ್ರಿಯೆ ನೀಡಿದ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಉನ್ನತ ನಾಯಕರು. ಬಿಜೆಪಿಯ ಹಿರಿಯರಿಗೆ ಸಿಗದ ಸ್ಥಾನಮಾನ ಸೋಮಣ್ಣಗೆ ಸಿಕ್ಕಿದೆ. ಉಪಚುನಾವಣೆಯಲ್ಲಿ ಸೋತರೂ ಎಂಎಲ್‌ಸಿ ಮಾಡಿದ್ದೆವು. ಸೂಕ್ತ ಸ್ಥಾನಮಾನ ಸಿಕ್ಕಿಲ್ಲವೆಂದು ಬೇಸರವಾಗುವುದು ಬೇಡ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
