ರಕ್ಷಣಾ ಕ್ಷೇತ್ರದಲ್ಲಿ ಸಾವಿರ ಹೊಸ ಸ್ಟಾರ್ಟಪ್​ಗಳ ಆರಂಭ: ಪ್ರಧಾನಿ ಮೋದಿ

ವಡೋದರಾ

    ಕಳೆದ ಒಂದು ದಶಕದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ವಿವಿಧ ಕ್ರಮಗಳ ಪರಿಣಾಮವಾಗಿ ಭಾರತದಲ್ಲಿ ರಕ್ಷಣಾ ಕ್ಷೇತ್ರ ಹುಲುಸಾಗಿ ಬೆಳೆಯುತ್ತಿದೆ. ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆ ಹೆಚ್ಚುತ್ತಿದೆ. ಕಳೆದ ಐದಾರು ವರ್ಷದಲ್ಲಿ 1,000 ಹೊಸ ಸ್ಟಾರ್ಟಪ್​ಗಳು ಆರಂಭವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್​ನ ವಡೋದರಾ ನಗರದಲ್ಲಿ ಟಾಟಾ ಏರ್​ಕ್ರಾಫ್ಟ್ ಕಾಂಪ್ಲೆಕ್ಸ್​ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಮೋದಿ, ಸರ್ಕಾರ ತೆಗೆದುಕೊಂಡ ವಿವಿಧ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

 
    ಉತ್ತರಪ್ರದೇಶ ಮತ್ತು ತಮಿಳುನಾಡಿನಲ್ಲಿ ಎರಡು ದೊಡ್ಡ ಡಿಫೆನ್ಸ್ ಕಾರಿಡಾರ್​ಗಳನ್ನು ಸ್ಥಾಪಿಸಿದ್ದೇವೆ,’ ಎಂದು ಪ್ರಧಾನಿಗಳು ಮಾಹಿತಿ ನೀಡಿದ್ದಾರೆ. ಕಳೆದ ಹತ್ತು ವರ್ಷದಲ್ಲಿ ಭಾರತದ ರಕ್ಷಣಾ ಉತ್ಪನ್ನಗಳ ರಫ್ತು 30 ಪಟ್ಟು ಹೆಚ್ಚಿದೆ. ನೂರಕ್ಕೂ ಹೆಚ್ಚು ದೇಶಗಳಿಗೆ ಇವತ್ತು ರಕ್ಷಣಾ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದೇವೆ. ದೇಶದಲ್ಲಿ 18,000ಕ್ಕೂ ಹೆಚ್ಚು ವಿಮಾನದ ಬಿಡಿಭಾಗಗಳನ್ನು ತಯಾರಿಸಲಾಗುತ್ತದೆ. ಸಣ್ಣ ಮತ್ತು ಕಿರು ಉದ್ಯಮಗಳು ಈ ತಯಾರಿಕಾ ಕಾರ್ಯವನ್ನು ಮುನ್ನಡೆಸಲಿವೆ ಎಂದು ಮೋದಿ ಹೇಳಿದ್ಧಾರೆ.
   ಟಾಟಾ ಏರ್​ಕ್ರಾಫ್ಟ್ ಕಾಂಪ್ಲೆಕ್ಸ್​ನಲ್ಲಿ ಏರ್​ಬಸ್​ನ ಸಿ-295 ಯುದ್ಧವಿಮಾನದ ತಯಾರಿಕೆ ನಡೆಯಲಿದೆ. ಏರ್​ಬಸ್ ಸಹಯೋಗದಲ್ಲಿ ಟಾಟಾ ಸಂಸ್ಥೆ 40 ಮಿಲಿಟರಿ ವಿಮಾನಗಳನ್ನು ಇಲ್ಲಿ ಮ್ಯಾನುಫ್ಯಾಕ್ಚರ್ ಮಾಡಲಿದೆ. ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಮತ್ತು ನರೇಂದ್ರ ಮೋದಿ ಜಂಟಿಯಾಗಿ ಈ ಘಟಕಕ್ಕೆ ಚಾಲನೆ ನೀಡಿದ್ದಾರೆ.
   ಕಳೆದ ಒಂದು ದಶಕದಲ್ಲಿ ಭಾರತದಲ್ಲಿ ರಕ್ಷಣಾ ಉತ್ಪಾದನೆ 43,746 ಕೋಟಿ ರೂನಿಂದ 1,27,265 ಕೋಟಿ ರೂಗೆ ಹೆಚ್ಚಿದೆ. ಖಾಸಗಿ ವಲಯದ ಪಾಲು ಇದರಲ್ಲಿ ಶೇ. 21ರಷ್ಟಿದೆ. 16,000ಕ್ಕೂ ಹೆಚ್ಚು ಎಂಎಸ್​ಎಂಇಗಳು ಡಿಫೆನ್ಸ್ ಇಕೋಸಿಸ್ಟಂನ ಭಾಗವಾಗಿವೆ.

Recent Articles

spot_img

Related Stories

Share via
Copy link
Powered by Social Snap