ಇಂದು ಸಂಜೆ ಕೋವಿಡ್ ಪರಿಸ್ಥಿತಿ ಕುರಿತು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ.

ದೆಹಲಿ:

ಕೋವಿಡ್-19 ಹಾಗೂ ಒಮಿಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಇಂದು ಸಂಜೆ 4:30 ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ.

ಈ ವರ್ಷ(2022) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ಕೊರೊನಾ ಪರಿಸ್ಥಿತಿ ಕುರಿತು ನಡೆಸುತ್ತಿರುವ ಮೊದಲ ಸಭೆ ಇದಾಗಿದೆ.

       ಪ್ರಧಾನಿ ಮೋದಿ ಕಳೆದ ವರ್ಷ ಮುಖ್ಯಮಂತ್ರಿಗಳೊಂದಿಗೆ ಹಲವು ಸಭೆಗಳನ್ನು ನಡೆಸಿದ್ದಾರೆ.

ಮೋದಿ ಅವರು ಜನವರಿ 9 ರಂದು ದೇಶದ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಆ ಪರಿಶೀಲನಾ ಸಭೆಯಲ್ಲಿ, ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯಗಳನ್ನು ಖಚಿತಪಡಿಸಿಕೊಳ್ಳುವ ಅಗತ್ಯ ಮತ್ತು ನಿರ್ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಕಳೆದ ಸಭೆಯಲ್ಲಿ, ರಾಜ್ಯ-ನಿರ್ದಿಷ್ಟ ಸನ್ನಿವೇಶಗಳು, ಉತ್ತಮ ಅಭ್ಯಾಸಗಳು ಮತ್ತು ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ಚರ್ಚಿಸಲು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ಕರೆಯಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದರು.

ಕಳೆದ ಬುಧವಾರ NITI ಆಯೋಗ್ ಸದಸ್ಯ ಡಾ ವಿಕೆ ಪಾಲ್ ಅವರು ಮಾತನಾಡಿ, ಕೊರೊನಾ ವೈರಸ್‌ನ ರೂಪಾಂತರಿ ಓಮಿಕ್ರಾನ್‌ನಿಂದ ಉಂಟಾಗುವ ಸೋಂಕನ್ನು ಸಾಮಾನ್ಯ ಶೀತ ಎಂದು ಪರಿಗಣಿಸಬಾರದು ಮತ್ತು ಜನರು ಅದನ್ನು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link