ನವದೆಹಲಿ :
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರಂತಹ ಜಾಗತಿಕ ನಾಯಕರನ್ನ ಸೋಲಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ‘ಜಾಗತಿಕ ನಾಯಕರ ಅನುಮೋದನೆ ರೇಟಿಂಗ್ ಪಟ್ಟಿಯಲ್ಲಿ ಶೇ.72ರಷ್ಟು ಗರಿಷ್ಠ ರೇಟಿಂಗ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ.
ಅಮೆರಿಕದ ಸಂಶೋಧನಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಅವರು 13 ವಿಶ್ವ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು ಮೆಕ್ಸಿಕೊ ಅಧ್ಯಕ್ಷ ಲೋಪೆಜ್ ಒಬ್ರಡಾರ್ ಶೇ.64, ಇಟಲಿ ಪ್ರಧಾನಿ ಮಾರಿಯೋ ದ್ರಾಘಿ ಶೇ.57,
ಫುಮಿಯೊ ಕಿಶಿಡಾ ಶೇ.47, ಜರ್ಮನ್ ಚಾನ್ಸಲರ್ ಓಲಾಫ್ ಶೋಲ್ಜ್ ಶೇ.42. ಅಮೆರಿಕ ಅಧ್ಯಕ್ಷ ಜೋ ಬಿಡೆನ್, ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೊ ಎಲ್ಲರೂ ಶೇ.41ರಷ್ಟು ರೇಟಿಂಗ್ ಗಳಿಸಿದ್ದಾರೆ.
ಇನ್ನು ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಶೇ.37, ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೋನಾರೊ ಮತ್ತು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ.35 ರೇಟಿಂಗ್ ಪಡೆದಿದ್ದಾರೆ.
ಅದ್ರಂತೆ, ಪ್ರಧಾನಿ ಮೋದಿ ಪರವಾಗಿ ಶೇಕಡಾ 71ರಷ್ಟು ಜನರು ಅನುಮೋದನೆಯಲ್ಲಿ ಮತ ಚಲಾಯಿಸಿದರೆ, ಶೇಕಡಾ 21ರಷ್ಟು ಜನರು ಅಸಮ್ಮತಿಯಿಂದ ಮತ ಚಲಾಯಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಸತತ ಮೂರನೇ ವರ್ಷವೂ ವಿಶ್ವ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ