ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ; ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ, ಓರ್ವ ಯೋಧ ಹುತಾತ್ಮ, ,4 ಮಂದಿಗೆ ಗಾಯ

ಶ್ರೀನಗರ:

 ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಉಗ್ರರು ದಾಳಿ ಮಾಡಿ ಓರ್ವ ಯೋಧನನ್ನು ಕೊಂದು ಹಾಕಿದ್ದಾರೆ.

ಶ್ರೀಲಂಕಾ ಬಿಕ್ಕಟ್ಟು: ಶ್ರೀಲಂಕಾ ಪರ ನಿಂತ ಪ್ರಧಾನಿ ಮೋದಿ

ಜಮ್ಮುವಿನ ಸುಂಜ್ವಾನ್ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭದ್ರತಾ ಪಡೆಯ ಯೋಧ ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.

 ಹಿಜಾಬ್ ವಿವಾದ; ಪಿಯು ಪರೀಕ್ಷೆ ಬರೆಯದೆಯೇ ವಾಪಸ್ ಆದ ವಿದ್ಯಾರ್ಥಿನಿಯರು

ಶುಕ್ರವಾರ ಮುಂಜಾನೆಯಿಂದಲೇ ಜಮ್ಮುವಿನ ಸುಂಜ್ವಾನ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ. ಭಯೋತ್ಪಾದಕರು ಮನೆಯೊಂದರಲ್ಲಿ ಅಡಗಿ ಕುಳಿತಿದ್ದು, ರಾತ್ರಿಯಿಂದ ನಾವು ಈ ಪ್ರದೇಶವನ್ನು ಸುತ್ತುವರೆದಿದ್ದೇವೆ ಎಂದು ಮುಕೇಶ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಸುಂಜ್ವಾನ್ ಸೇನಾ ಠಾಣೆಯ ಸಮೀಪವಿರುವ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಕನಿಷ್ಠ ಇಬ್ಬರು ಶಸ್ತ್ರಸಜ್ಜಿತ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇಲೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ನಗರದಲ್ಲಿ ಪ್ರಮುಖ ಪ್ರದೇಶಗಳಲ್ಲಿ ನಾಕಾಬಂದಿ ಹಾಕಲಾಗಿದ್ದು, ಉಗ್ರರು ತಪ್ಪಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಡುತ್ತಿದೆ ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ಭೀತಿ; 81 ಸ್ಥಾವರಗಳಲ್ಲಿ ನಿಶ್ಚಿತ ದಾಸ್ತಾನಿಲ್ಲ

ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದು ಮತ್ತು ಈ ವೇಳೆ ಪ್ರತಿದಾಳಿ ನಡೆಸಿದ ಶೋಧಕ ತಂಡಗಳ ಮೇಲೆ ಗುಂಡು ಹಾರಿಸಿದ್ದಾರೆ. ಪ್ರಸ್ತುತ ಘಟನಾ ಪ್ರದೇಶಕ್ಕೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಭಯೋತ್ಪಾದಕರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ಪುನೀತ್ ಧ್ವನಿಯಲ್ಲಿ `ಜೇಮ್ಸ್’ ರೀ ಎಂಟ್ರಿ!

ಫೆಬ್ರವರಿ 10, 2018 ರಂದು, ಮೂರು ಜೆಇಎಂ ಭಯೋತ್ಪಾದಕರು ಸುಂಜ್ವಾನ್ ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದರು ಮತ್ತು ನಂತರದ ಗುಂಡಿನ ಚಕಮಕಿಯಲ್ಲಿ ಆರು ಸೈನಿಕರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದರು. ಎಲ್ಲಾ ಮೂವರು ಭಯೋತ್ಪಾದಕರನ್ನು ಸಹ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ರಾಜ್ಯದಲ್ಲಿ 100 ಪಾಸಿಟಿವ್‌ ಪತ್ತೆ: ಪಾಸಿಟಿವಿಟಿ ದರ ಶೇ.1.2 ಏರಿಕೆ

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಾಂಬಾ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಭೇಟಿಗೆ ಎರಡು ದಿನಗಳ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಗಳ ನಡುವೆ ಸುಂಜ್ವಾನ್‌ನಲ್ಲಿ ಎನ್‌ಕೌಂಟರ್ ನಡೆದಿದೆ. ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು, ಪ್ರಧಾನ ಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲು ಇಲ್ಲಿಂದ 17 ಕಿಮೀ ದೂರದಲ್ಲಿರುವ ಪಾಲಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಹಿಂದಿನ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಮತ್ತು ಆಗಸ್ಟ್ 2019 ರಲ್ಲಿ ಅದರ ಗಡಿಗಳ ವಿಭಜನೆಯ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಮೋದಿಯವರ ಮೊದಲ ಭೇಟಿ ಇದಾಗಿದೆ.

ಮಸೀದಿಗಳ ಆಜಾನ್ ಮೈಕ್‍ಗಳಿಗೆ ಹೊಸ ಸುತ್ತೋಲೆ ; ಸಿಎಂ ಬೊಮ್ಮಾಯಿ

ಅವರು ಅಕ್ಟೋಬರ್ 27, 2019 ರಂದು ರಾಜೌರಿಯಲ್ಲಿ ಮತ್ತು ನವೆಂಬರ್ 3, 2021 ರಂದು ಜಮ್ಮು ವಿಭಾಗದ ನೌಶೇರಾ ಸೆಕ್ಟರ್‌ನಲ್ಲಿ ಸೇನಾ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ