ಚಿತ್ರದುರ್ಗ
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಮೊದಲ ಪೋಕ್ಸೊ ಕೇಸ್‌ನಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಬುಧವಾರ ತೀರ್ಪು ಪ್ರಕಟಿಸಿದ್ದು, ಮೊದಲ ಪ್ರಕರಣದಲ್ಲಿ ಮುರುಘಾ ಶ್ರೀಗಳು ಖುಲಾಸೆಗೊಂಡಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಶರಣರ ಪ್ರಕರಣದ ವಾದ-ಪ್ರತಿವಾದ ಪೂರ್ಣಗೊಂಡಿತ್ತು. ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ಇದೀಗ ತೀರ್ಪು ಪ್ರಕಟಿಸಿದ್ದಾರೆ.
ಎ1 ಮುರುಘಾ ಶ್ರೀ, ಎರಡನೇ ಆರೋಪಿ ರಶ್ಮಿ, ನಾಲ್ಕನೇ ಆರೋಪಿ, ಮಠದ ಮ್ಯಾನೇಜರ್ ಪರಮಶಿವಯ್ಯ ನಿರ್ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ. ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದರೆ ಮುರುಘಾ ಶ್ರೀಗಳಿಗೆ ಕನಿಷ್ಠ 20 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇತ್ತು. ಮುರುಘಾ ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸುದೀರ್ಘ ವಿಚಾರಣೆ ನಡೆದಿದ್ದು, ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದೆ.








