ತುಮಕೂರು:
ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಪೂರ್ಣ ಮಾಡದಿದ್ದರೆ ಕಿರುಕುಳ ಕೊಡುತ್ತಿದ್ದ ಗಣಿತ ಶಿಕ್ಷಕನ ಮೇಲೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಗೋಡೆಕೆರೆ ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ಹೆಚ್.ಎಸ್ ರವಿ ಎಂಬಾತ ಅತಿಯಾದ ಹೋಮ್ ವರ್ಕ್ ಕೊಟ್ಟು, ವರ್ಕ್ ಪೂರ್ಣ ಮಾಡದೇ ಇದ್ದರೆ ಕಿರುಕುಳ ಕೊಡುತ್ತಿದ್ದ. ಈ ಹಿನ್ನಲೆ ಮಕ್ಕಳು ಪೋಷಕರ ಬಳಿ ‘ಶಿಕ್ಷಕರು ಕಿರುಕುಳ ಕೊಡುತ್ತಾರೆ ಶಾಲೆಗೆ ಹೋಗುವುದಿಲ್ಲವೆಂದು ಹೇಳಿಕೊಂಡಿದ್ದಾರೆ.
ಹೀಗಾಗಿ ಪೋಷಕರು ಚಿಕ್ಕನಾಯಕನಹಳ್ಳಿ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬೀಳಬೇಕಿದೆ.