ಅಕ್ರಮ ಬಾಂಗ್ಲಾ ವಲಸಿಗರಿಂದ ದಾಂಧಲೆ: ಪೊಲೀಸರ ಸ್ಪಷ್ಟನೆ

ಬೆಂಗಳೂರು:

    ಬೆಂಗಳೂರಿನ ಖಾಸಗಿ ಕಾಲೇಜಿನ ಮೈದಾನದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ದಾಂಧಲೆ ನಡೆಸಿದ್ದಾರೆ ಎಂದು ವರದಿಯಾಗಿದ್ದು, ಈ ಕುರಿತು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.ಬೆಂಗಳೂರಿನ ವರ್ತೂರಿನ ಸರ್ಜಾಪುರದಲ್ಲಿರುವ ಖಾಸಗಿ ಕಾಲೇಜಿನ ಮೈದಾನದಲ್ಲಿ ಅನುಮತಿ ಪಡೆಯದೇ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.

   ದೊಡ್ಡ ದೊಡ್ಡ ಸ್ಪೀಕರ್ ಗಳ ಮೂಲಕ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದು, ಈ ಪೈಕಿ ಅಕ್ರಮ ಬಾಂಗ್ಲಾ ವಲಸಿಗರು ಕೂಡ ಸೇರಿದ್ದರು ಎಂದು ವರದಿಯಲ್ಲಿ ಆರೋಪಿಸಲಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರ್ಯಕ್ರಮ ಆಯೋಜಕರನ್ನು ಪ್ರಶ್ನಿಸಿ, ಕಾರ್ಯಕ್ರಮ ನಿಲ್ಲಿಸುವಂತೆ ಕೇಳಿದ್ದಾರೆ. ಈ ವೇಳೆ ಅಲ್ಲಿದ್ದ ಕೆಲ ಪುಂಡರು ಪೊಲೀಸರೊಂದಿಗೇ ವಾಗ್ವಾದ ನಡೆಸಿದ್ದು ಮಾತ್ರವಲ್ಲದೇ ಈ ವೇಳೆ ಅಲ್ಲಿದ್ದ ಕುರ್ಚಿ-ಪಿಠೋಪಕರಣಗಳನ್ನು ಧ್ವಂಸ ಮಾಡಿ ದಾಂಧಲೆ ನಡೆಸಿದ್ದಾರೆ. 

   ಇನ್ನು ಈ ಪ್ರಕರಣ  ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಈ ಕುರಿತು ಎಕ್ಸ್ ನಲ್ಲಿ ಸ್ಪಷ್ಟನೆ ನೀಡಿರುವ ಬೆಂಗಳೂರು ಪೊಲೀಸರು, ‘ವರ್ತೂರು ಪೊಲೀಸ್ ಠಾಣೆಯ ಸರಹದ್ದಿನಲ್ಲಿ 08.09.24 ರಂದು ನಡೆದ ಅಸ್ಸಾಂ ರಾಜ್ಯ ಬುಡಕಟ್ಟುಜನರ ಸಂಸ್ಕ್ರತಿ ಹಬ್ಬ ಆಚರಿಸುವ ಸಂಬಂಧ 500 ಜನ ಸೇರುವುದಾಗಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು 2-3 ಸಾವಿರ ಜನ ಸೇರಿ ತಳ್ಳಾಟ ಉಂಟಾಗಿರುತ್ತದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಇರುವುದನ್ನು ಮನಗಂಡು ಕಾರ್ಯಕ್ರಮವನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದುಪಡಿಸಲಾಗಿರುತ್ತದೆ ಎಂದಿದ್ದಾರೆ.

Recent Articles

spot_img

Related Stories

Share via
Copy link
Powered by Social Snap