ಬೆಂಗಳೂರು:
ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಆರಂಭಿಸಿದ್ದ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮೊದಲೇ ಪೊಲೀಸರು ಬುಧವಾರ ತಡೆದಿದ್ದು, ಎಲ್ಲರನ್ನೂ ವಶಕ್ಕೆ ಪಡೆದರು.
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನೂ ಬಸ್‌ಗಳಲ್ಲಿ ಕರೆತಂದು ಸ್ವಾತಂತ್ರ್ಯ ಉದ್ಯಾನದ ಬಳಿ ಇಳಿಸಿದರು.
ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಜ.1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಿಸಿದ್ದು, ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಿದ್ದರು.ಆಮ್ ಆದ್ಮಿ ಪಕ್ಷದ ರಾಜ್ಯ ಮುಖ್ಯಸ್ಥ ಹಾಗೂ ಮಾಜಿ ಶಾಸಕ ಮುಕ್ಯಮಂತ್ರಿ ಚಂದ್ರು ಅವರು ನೆಲಮಂಗಲದಲ್ಲಿ ಅತಿಥಿ ಉಪನ್ಯಾಸಕರನ್ನು ಬೆಳಗ್ಗೆ ಭೇಟಿ ಮಾಡಿದರು.
ದೆಹಲಿ ಎಎಪಿ ಸರ್ಕಾರದ ಮಾದರಿಯಲ್ಲಿ ಅವರ ಸೇವೆಗಳನ್ನು ಕ್ರಮಬದ್ಧಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.