ಜಯಪ್ರದಾ ಪತ್ತೆಗೆ ಪೊಲೀಸರ ತಂಡ ರಚನೆ : ಕಾರಣ ಗೊತ್ತಾ…?

ರಾಂಪುರ:

     ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ರಾಂಪುರ ಪೊಲೀಸರು ತಂಡವೊಂದನ್ನು ರಚನೆ ಮಾಡಿದ್ದಾರೆ.

    ಎರಡೂ ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಯಪ್ರದಾ ವಿರುದ್ಧ ಮಧ್ಯಪ್ರದೇಶ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಜಯಪ್ರದಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದೆ.

    ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಜನವರಿ 10ರೊಳಗೆ ಜಯಪ್ರದಾ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಬೇಕಿದೆ. ಹೀಗಾಗಿ ಆದೇಶಕ್ಕೆ ಅನುಗುಣವಾಕಿ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ರಾಂಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಅವರು ಹೇಳಿದ್ದಾರೆ.

    ಜಯಪ್ರದಾ ವಿರುದ್ಧ ದಾಖಲಾಗಿರುವ ಎರಡೂ ಪ್ರಕರಣಗಳು  2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದ್ದಾಗಿವೆ. ಆಗ ಜಯಪ್ರದಾ ಅವರು ಬಿಜೆಪಿ ಟಿಕೆಟ್‌ನಲ್ಲಿ ರಾಂಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಇವರ ವಿರುದ್ಧ ಸ್ವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣವಿದೆ. ಇದರಲ್ಲಿ ನೂರಪುರ ಗ್ರಾಮದಲ್ಲಿ ಅ.19ರಂದು ನೀತಿ ಸಂಹಿತೆ ಇದ್ದರೂ ರಸ್ತೆ ಉದ್ಘಾಟನೆ ಮಾಡಿದ ಆರೋಪವಿದೆ.

    ಎರಡನೇ ಪ್ರಕರಣವು ಕೆಮ್ರಿ ಪೊಲೀಸ್ ಠಾಣೆಯದ್ದಾಗಿದ್ದು, ಪಿಪ್ಲಿಯಾ ಮಿಶ್ರಾ ಗ್ರಾಮದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪ ನಟಿಯ ಮೇಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap