ನವದೆಹಲಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾಸಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದು.ಜನವರಿಯಲ್ಲಿ ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ವಿವರಗಳನ್ನು ಕೋರಿ ದೆಹಲಿ ಪೊಲೀಸರು ಬುಧವಾರ ಕಾಂಗ್ರೆಸ್ ನಾಯಕನಿಗೆ ನೋಟಿಸ್ ಜಾರಿ ಮಾಡಿದ್ದರು.
ಭಾರತ್ ಜೋಡೋ ಯಾತ್ರೆ ವೇಳೆ ‘ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.