ಬೆಂಗಳೂರು :
ಮದ್ಯ ಸೇವನೆ ಮಾಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಎಂಎಲ್ ಸಿ ಪುತ್ರ ಸೇರಿ ಸ್ನೇಹಿತರು ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಪಕ್ಷದ ಎಂಎಲ್ ಸಿ ನಸೀರ್ ಅಹ್ಮದ್ ಪುತ್ರ ಹಾಗೂ ಅವರಿಬ್ಬ ಸ್ನೇಹಿತರು ನಗರದ ಹೆಬ್ಬಾಳದ ಬಿಎಂಟಿಸಿ ಡಿಪೋ ಬಳಿ ಅಮೃತಹಳ್ಳಿ ಪೊಲೀಸ್ ಠಾಣೆಯ ಇಬ್ಬರೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮದ್ಯ ಸೇವಿಸಿ ಕಾರು ಚಲಾಯಿಸುತ್ತಿದ್ದರು. ಹೀಗಾಗಿ ಕಾರು ತಡೆದು ಅವರನ್ನು ಪ್ರಶ್ನಿಸಿದ್ದಕ್ಕೆ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮೃತಹಳ್ಳಿ ಠಾಣೆಯ ಇಬ್ಬರೂ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ ಪುತ್ರ, ಆತನ ಇಬ್ಬರೂ ಸ್ನೇಹಿತರು ಸೇರಿ ಮೂವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
