ಚಿತ್ರದುರ್ಗ
ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದ್ದು ಈದೇ ಸಂದರ್ಭದಲ್ಲಿ ನಾಯಕರುಗಳ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. ಅದರಂತೆ ಕೋಟೆ ನೋಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಎನ್ನುವ ವದಂತಿ ಹರಡಿದೆ.
ಕೆ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂತ್ರಗಾರಿಕೆ ರೂಪಿಸಿದ್ದಾರೆ. ಯಾಕೆಂದರೆ ಬಾದಾಮಿಯಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಇದೀಗ ಕೋಲಾರದಿಂದ ಸ್ಪರ್ಧಿಸಲಿದ್ದಾರೆ.
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 15 ಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿವೆ. ಇದಲ್ಲದೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆ ಒಳಗೊಂಡಂತೆ ಜಗಳೂರು, ಕೂಡ್ಲಿಗಿ, ಅರಸೀಕೆರೆ, ಹಾಸನ, ರಾಮನಗರ, ಮಾಗಡಿ, ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವು ಉತ್ತರ ಕರ್ನಾಟಕ ಭಾಗದಲ್ಲಿ ಸಹ ಗೊಲ್ಲ ಸಮುದಾಯದ ಮತಗಳು ಅಭ್ಯರ್ಥಿ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಲಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ