ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

ಬೆಂಗಳೂರು:

ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ. ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ.

 ಹುಬ್ಬಳ್ಳಿ ಸರ್ಕಿಟ್ ಹೌಸ್ ನಲ್ಲಿ  ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ..!

ಇದರ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಮುಂದಿನ 4 ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿಯೂ ಧಾರಾಕಾರ ಮಳೆ ಬೀಳಲಿದ್ದು, ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ’? : ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ  ಹೇಳಿಕೆ

ನಗರದಲ್ಲಿಂದು ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಶನಿವಾರ ಗುಡುಗು ಸಹಿತ ಭಾರಿ ಮಳೆ ಬೀಳಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಗರದ ಹಲವು ಬಡಾವಣೆಗಳಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಸಂಚಾರ ಅಸ್ತವ್ಯಸ್ತ: ಸಂಜೆ ಆರಂಭವಾದ ಮಳೆ ರಾತ್ರಿಯವರೆಗೆ ಧಾರಾಕಾರವಾಗಿ ಸುರಿಯಿತು. ರಸ್ತೆಗಳ ಮೇಲೆ 2 ರಿಂದ 3 ಅಡಿ ನೀರು ನಿಂತು ಹಲವು ವಾಹನಗಳು ಕೆಟ್ಟು ನಿಂತಿದ್ದವು. ಹೊಸಕೆರೆಹಳ್ಳಿ ರಸ್ತೆಯ ಪಿಇಎಸ್ ಕಾಲೇಜಿನ ಸಮೀಪದಲ್ಲಿ ಬಸ್ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಅನಾಹುತ ಸಂಭವಿಸಿಲ್ಲ. ಪ್ರಮುಖ ರಸ್ತೆಗಳಲ್ಲಿರುವ ಮರಗಳು ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ರಾಜ್ಯದಲ್ಲಿ ಶೀಘ್ರ ಗೋಮಾತಾ ಸಹಕಾರ ಸಂಘ : ಪ್ರಾಯೋಗಿಕವಾಗಿ ಸ್ಥಾಪಿಸಲು ಸಿಎಂ ಬೊಮ್ಮಾಯಿ ಸೂಚನೆ

ವಿದ್ಯುತ್ ಸರಬರಾಜು ಸ್ಥಗಿತ: ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದರಿಂದ ನಗರದ ಹಲವು ಬಡಾವಣೆಗಳಲ್ಲಿನ ನಿವಾಸಿಗಳು ಪರದಾಡಿದರು. 50ಕ್ಕೂ ಹೆಚ್ಚು ಮ್ಯಾನ್‌ಹೋಲ್‌ಗಳು ಉಕ್ಕಿಹರಿದವು. ಇಂದಿರಾನಗರ, ಉತ್ತರಹಳ್ಳಿ ಸೇರಿ ಹಲವೆಡೆ ಮರದ ಕೊಂಬೆಗಳು ಮುರಿದು ಬಿದಿದ್ದು ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ: ಶುಕ್ರವಾರ ಹೆಚ್‌ಎಎಲ್ ವಿಮಾನ ನಿಲ್ದಾಣದ ಸುತ್ತಮುತ್ತ ಅತಿ ಹೆಚ್ಚು 70 ಮಿ.ಮೀ ಮಳೆಯಾಗಿದೆ. ಕೆಂಗೇರಿಯಲ್ಲಿ 49 ಮಿ.ಮೀ, ಆರ್.ಆರ್. ನಗರದಲ್ಲಿ 33 ಮಿ.ಮೀ, ಬಸವನಗುಡಿಯಲ್ಲಿ 32 ಮಿ.ಮೀ, ಬಾಗಲೂರಿನಲ್ಲಿ 30 ಮಿ.ಮೀ ಹಾಗೂ ನಾಗರ ಬಾವಿಯಲ್ಲಿ 28 ಮಿ.ಮೀ. ಮಳೆ ಸುರಿದಿದೆ ಎಂದು ವರದಿಯಾಗಿದೆ.

LPG ಸಿಲಿಂಡರ್​ ದರದಲ್ಲಿ ಮತ್ತೆ 50 ರೂ. ಹೆಚ್ಚಳ! ಇಂದಿನಿಂದಲೇ ಜಾರಿ, ಗ್ರಾಹಕರಿಗೆ ಬೆಲೆ ಏರಿಕೆ ಬರೆ

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap