ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ‘ಬಸವಶ್ರೀ’ ಪ್ರಶಸ್ತಿ ನಾಳೆ ಪ್ರದಾನ

ಚಿತ್ರದುರ್ಗ:

ಚಿತ್ರದುರ್ಗದ ಮುರುಘಾ ಮಠದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಸಂದಿದ್ದು, ನಾಳೆ ಶ್ರೀಮಠದ ಅನುಭವ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇದನ್ನು ಪ್ರದಾನ ಮಾಡಲಾಗುವುದು.

ಇಂದಿನಿಂದ ಪ್ರಧಾನಿ ಮೋದಿ 3 ದಿನ ವಿದೇಶ ಪ್ರವಾಸ: ಜರ್ಮನಿ, ಡೆನ್ಮಾರ್ಕ್, ಫ್ರಾನ್ಸ್ ಗೆ ನಮೋ ಭೇಟಿ

ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ‘ಬಸವಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಡಾಕ್ಟರ್ ಶ್ರೀ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ನಟರಾದ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಉಪಸ್ಥಿತರಿರಲಿದ್ದಾರೆ.

ಪಿಎಸ್‌ಐ ಪರೀಕ್ಷೆ ಅಕ್ರಮ: ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

ಬಸವಶ್ರೀ ಪುರಸ್ಕೃತರ ಕುರಿತು ಹಿರಿಯ ಸಾಹಿತಿ, ನಾಟಕಕಾರ ಡಾ. ರಾಜಪ್ಪ ದಳವಾಯಿ ಮಾತನಾಡಲಿದ್ದು, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅನಿವಾಸಿ ಭಾರತೀಯ ಉದ್ಯಮಿ ಭರತ್ ಕುಮಾರ್, ಚಿತ್ರೋದ್ಯಮಿ ಚಿನ್ನೇಗೌಡ ಭಾಗವಹಿಸಲಿದ್ದಾರೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link