ಪವರ್‌ ಟಿವಿ ಸ್ಥಗಿತಕ್ಕೆ ಹೈಕೋರ್ಟ್‌ ಆದೇಶ….!

ಬೆಂಗಳೂರು:

    ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್‌ ಟಿವಿ ಕನ್ನಡ ಸುದ್ದಿ ವಾಹಿನಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ.

   ಜೆಡಿಎಸ್‌ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ ಎಂ ರಮೇಶ್‌ ಗೌಡ, ಅವರ ಪತ್ನಿ ಡಾ.ಎ ರಮ್ಯಾ ರಮೇಶ್‌ ಹಾಗೂ ಹಿರಿಯ ಐಪಿಎಸ್‌ ಅಧಿಕಾರಿ ಬಿ ಆರ್‌ ರವಿಕಾಂತೇಗೌಡ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಸಂದೇಶ್‌ ಚೌಟ ಹಾಗೂ ಡಿ ಆರ್ ರವಿಶಂಕರ್‌ ಅವರು ಪ್ರತಿವಾದಿ ರಾಕೇಶ್ ಶೆಟ್ಟಿ, ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ವಾಸ್ತವದಲ್ಲಿ ಇವರು ತಮ್ಮ ಚಾನೆಲ್‌ ಅನ್ನು ಕಾನೂನುಬಾಹಿರವಾಗಿ ನಡೆಸುತ್ತಿದ್ದಾರೆ. 2021ರಿಂದಲೂ ಚಾನೆಲ್‌ನ ಪರವಾನಗಿ ನವೀಕರಿಸಿಲ್ಲ ಎಂಬ ಅಂಶಗಳನ್ನು ವಿಸ್ತೃತವಾಗಿ ಪೀಠದ ಗಮನಕ್ಕೆ ತಂದರು.

    ಸುದೀರ್ಘ ವಾದ ಆಲಿಸಿದ ಪೀಠವು ಪ್ರತಿವಾದಿ ರಾಕೇಶ್‌ ಶೆಟ್ಟಿ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ–1995ರ ಆದೇಶವನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್‌ನಲ್ಲಿ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು ಎಂದು ಪ್ರಕರಣದ ಪ್ರತಿವಾದಿಯಾದ ಮೆಸರ್ಸ್‌ ಪವರ್‌ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಪ್ರತಿನಿಧಿಯಾಗಿರುವ ಹೆಚ್ಚುವರಿ ನಿರ್ದೇಶಕ ರಾಕೇಶ್‌ ಸಂಜೀವ ಶೆಟ್ಟಿ ಅಲಿಯಾಸ್‌ ರಾಕೇಶ್‌ ಶೆಟ್ಟಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap