ಬೆಂಗಳೂರು:
ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಕ್ರೋಶಭರಿತರಾದ ಪ್ರದೀಪ್ ಈಶ್ವರ್ ಬಿಜೆಪಿ ಕಾರ್ಯಕ್ರರ್ತರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವೇದಿಕೆ ಮೇಲೆ ಪ್ರದೀಪ್ ಈಶ್ವರ್ ಮಕ್ಕಳ ಶಿಕ್ಷಣ ಕುರಿತಂತೆ ಮಾತನಾಡುತ್ತಿದ್ದರು. ಇದಕ್ಕೆ ಕೆಲ ಬಿಜೆಪಿ ಕಾರ್ಯಕರ್ತರು ಆಕ್ಷೇಪ ಎತ್ತಿದರು. ಇದರಿಂದ ಆಕ್ರೋಶಗೊಂಡ ಪ್ರದೀಪ್ ಈಶ್ವರ್, ಸಮುದಾಯ ಗುಣಗಾನ ಮಾಡೋಕೆ ಇದೇನು ಬಿಜೆಪಿ ಕಾರ್ಯಕ್ರಮ ಅಂದುಕೊಂಡಿದ್ದೀರಾ? ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೋದು. ಬಿಜೆಪಿ ಗುಣಗಾನ ಮಾಡೋದು ನಿಲ್ಲಬೇಕು. ಬಾಯಿ ಮುಚ್ಕೊಂಡು ಕೂತ್ಕೊಬೇಕು. ರಾಜ್ಯದಲ್ಲಿ ಸಿದ್ದರಾಮಯ್ಯನ ಸರ್ಕಾರ ಇರೋದು, ನಿಮ್ಮಪ್ಪನ ಸರ್ಕಾರ ಅಲ್ಲ ಎಂದು ಏಕವಚನದಲ್ಲೇ ಮಾತನಾಡಿದರು.
