ತಮ್ಮ ವೈಫಲ್ಯ ಮರೆಮಾಚಲು ಆಧಾರರಹಿತ ಆರೋಪ : ಪ್ರಹ್ಲಾದ್‌ ಜೋಶಿ

ಬೆಂಗಳೂರು:

     ಆಂತರಿಕ ಭಿನ್ನಾಭಿಪ್ರಾಯ ಮತ್ತು ಗ್ಯಾರಂಟಿ ಯೋಜನೆಗಳ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ತಮ್ಮ ವೈಫಲ್ಯಗಳ ಮರೆಮಾಚಲು ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಅವರು ಮಂಗಳವಾರ ಹೇಳಿದರು.

    ರಾಜ್ಯ ಬಿಜೆಪಿ ಕಚೇರಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಸುಳ್ಳು ಕ್ಯಾಂಪೇನ್ ಶುರು ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವರು ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳಿದ್ದಾರೆ. ಪೂರ್ವ ಯೋಜನೆ ಇಲ್ಲದೆ ಗ್ಯಾರಂಟಿಗಳನ್ನು ಘೋಷಣೆ ಮಾಡಿ, ಈಗ ಅರೆಬರೆ ಪೂರೈಸಿದಂತೆ ತೋರಿಸಿ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಲಾಗುತ್ತಿದೆ ಎಂದು ಹೇಳಿದರು.

   ಹಣ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋರ ನಿರಾಧಾರವಾದದ್ದು. ಕರ್ನಾಟಕದಲ್ಲಿ, ಫೆಬ್ರವರಿ ಮಧ್ಯದಲ್ಲಿ 38 ರಷ್ಟು ಬಜೆಟ್ ಇನ್ನೂ ಖರ್ಚಾಗಿಲ್ಲ ಮತ್ತು ಅವರು ಮಾರ್ಚ್‌ನಲ್ಲಿ ಮಾತ್ರ ಲೆಕ್ಕಪತ್ರಗಳನ್ನು ತೋರಿಸುತ್ತಾರೆ ಎಂದು ಅವರು ಹೇಳಿದರು, ಕೇಂದ್ರದಲ್ಲಿ, ಪ್ರಧಾನಿ ಪ್ರತಿ ತಿಂಗಳು ಸಭೆಗಳನ್ನು ನಡೆಸಿ ಸ್ಥಿತಿಯನ್ನು ಪರಿಶೀಲಿಸುತ್ತಾರೆ.

    ರಾಜ್ಯ ಕಾಂಗ್ರೆಸ್ ನಾಯಕರ ಹಣ ಬಿಡುಗಡೆಯಲ್ಲಿ ಅಸಮಾನತೆಯ ಆರೋಪ ನಿರಾಧಾರ ಎಂದು ಸಚಿವರು ಹೇಳಿದರು. ಕರ್ನಾಟಕದಲ್ಲಿ, ಫೆಬ್ರವರಿ ಮಧ್ಯದಲ್ಲಿ 38 ರಷ್ಟು ಬಜೆಟ್ ಇನ್ನೂ ಖರ್ಚಾಗಿಲ್ಲ. ಮಾರ್ಚ್‌ನಲ್ಲಿ ಮಾತ್ರ ಲೆಕ್ಕಪತ್ರಗಳನ್ನು ತೋರಿಸುತ್ತಾರೆ, ಕೇಂದ್ರದಲ್ಲಿ ಪ್ರಧಾನಿ ಮೋದಿ ಪ್ರತಿ ತಿಂಗಳು ಸಭೆಗಳನ್ನು ನಡೆಸಿ ಸ್ಥಿತಿಗಳನ್ನು ಪರಿಶೀಲಿಸುತ್ತಾರೆ.

   ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 2004ರಿಂದ 2014ರ ವರೆಗೆ ರಾಜ್ಯಕ್ಕೆ 60 ಸಾವಿರ ಕೋಟಿ ರು. ಅನುದಾನ ನೀಡಲಾಗಿತ್ತು. ಆದರೆ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ ರಾಜ್ಯಕ್ಕೆ 2.36 ಲಕ್ಷ ಕೋಟಿ ರು. ಅನುದಾನ ನೀಡಿದೆ. ಯುಪಿಎ ಅವಧಿಯ ಐದಾರು ಪಟ್ಟು ಹೆಚ್ಚು ತೆರಿಗೆಯನ್ನು ರಾಜ್ಯಕ್ಕೆ ನೀಡಲಾಗಿದೆ. ಜಿಎಸ್‌ಟಿ ಪರಿಹಾರ ನಯಾ ಪೈಸೆ ಬಾಕಿ ಇಲ್ಲ. ಹೀಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಅಭಿನಂದಿಸಬೇಕೋ ಅಥವಾ ಟೀಕಿಸಬೇಕೋ ಎಂದು ಪ್ರಶ್ನಿಸಿದರು.

    ಯುಪಿಎ ಎರಡು ಅವಧಿಯಲ್ಲಿ ರಾಜ್ಯಕ್ಕೆ ಎನ್‌ಡಿಆ‌ರ್ ಎಫ್ ನಿಧಿಯಿಂದ 3,655 ಸಾವಿರ ಕೋಟಿ ರು. ನೀಡಲಾಗಿತ್ತು. ಆದರೆ, ಕಳೆದ 10 ವರ್ಷಗಳಲ್ಲಿ 12,542 ಸಾವಿರ ಕೋಟಿ ರು. ನೀಡಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಮಾಹಿತಿ ನೀಡುವ ಕ್ಯಾಂಪೇನ್ ಶುರು ಮಾಡಿದ್ದಾರೆ. ಹೀಗಾಗಿ ಇವರನ್ನು ಸುಳ್ಳು ರಾಮಯ್ಯ ಎನ್ನಬೇಕು. ಜನಕ್ಕೆ ನೀಡಿದ ಭರವಸೆ ಪೂರೈಸಲು ಸಾಧ್ಯವಾಗಿಲ್ಲ. ಇನ್ನು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಗುಂಪುಗಳ ನಡುವಿನ ಜಗಳವನ್ನು ಬೇರೆಡೆಗೆ ತಿರುಗಿಸಲು ಈ ರೀತಿ ನಾಟಕ ಮಾಡುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap