ಬೆಂಗಳೂರು:
ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣವು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಮುಖಂಡ ದೇವರಾಜೇಗೌಡ ಮತ್ತು ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಮಾತಾಡಿದ್ದಾರೆ ಎನ್ನಲಾದ ಮತ್ತೊಂದು ಆಡಿಯೋ ವೈರಲ್ ಆಗಿದೆ
ಎಸ್ಐಟಿಯವರು ಮಾಹಿತಿ ಕೇಳಿದ್ರೆ, ಡಿಕೆ ಶಿವಕುಮಾರ್ ಬಗ್ಗೆ ಏನು ಹೇಳಬೇಡ ಎಂದು ಎಲ್ ಆರ್ ಶಿವರಾಮೇಗೌಡ, ದೇವರಾಜೆಗೌಡ ಗೌಡಗೆ ಹೇಳುತ್ತಾರೆ. ಈ ಆಡಿಯೋ ಇದೀಗ ಭಾರೀ ಸದ್ದು ಮಾಡುತ್ತಿದೆ.
ಶಿವರಾಮೇಗೌಡ: ಕೊಡ್ತಾರೆ…ಕೊಡ್ತಾರೆ…ಕೊಡ್ತಾರೆ…
ದೇವರಾಜೆಗೌಡ: ಅಲ್ಲಿ ಏನು ಮಾತಾಡೋದು ಅಣ್ಣ ಬೇರೆ…?
ಶಿವರಾಮೇಗೌಡ: ಎಸ್ಐಟಿ ಅವರು ನೋಟಿಸ್ ಕೊಟ್ಟಾಗಲು ಡಿಕೆ ಬಗ್ಗೆ ಚಕಾರ ಎತ್ತಬೇಡ….
ದೇವರಾಜೆಗೌಡ: ಸರಿ ಸರಿ ಅಣ್ಣ….
ಶಿವರಾಮೇಗೌಡ: ನಾನ್ ಇವತ್ತಿಂದ ಹೋರಾಟ ಮಾಡ್ತಿಲ್ಲ..
ದೇವರಾಜೆಗೌಡ: ಹೌದಾ ಅಣ್ಣ
ಶಿವರಾಮೇಗೌಡ: ಈ ಕೃತ್ಯಗಳೆಲ್ಲಾ ಕಡಿಮೆ ಮಾಡಬೇಕು.. ನಮ್ಮ ತಾಲೂಕು ಕ್ಲೀನ್ ಆಗಬೇಕು ಅಂತಾ ನಾನು ಬಹಳ ದಿವಸದಿಂದ ಹೋರಾಟ ಮಾಡ್ತಾ ಇದ್ದೀನಿ… ವೀಡಿಯೋ ಬಿಟ್ಟಿರೋದು ಫೇಸ್ಬುಕ್ನಲ್ಲಿ.. ನಾನು ಹೋರಾಟ ಮಾಡ್ತಾ ಇದ್ದೀನಿ… ಕೋರ್ಟ್ನಲ್ಲೂ ಅವರ ವಿರುದ್ದವಾಗಿ ಹೋರಾಟ ಮಾಡಿದ್ದೀನಿ.. ಇದು ಬಿಟ್ರೆ ಬೇರೆ ಚರ್ಚೆನೆ ಇಲ್ಲ ಅಂತಾ ಹೇಳು….
ದೇವರಾಜೆಗೌಡ: ಸರಿ ಸರಿ ಅಣ್ಣ
ಈ ಹಿಂದೆ ಡಿಕೆ ಶಿವಕುಮಾರ್ ಹಾಗೂ ಶಿವರಾಮೇ ಗೌಡ ಮಾತನಾಡಿದ್ದರು ಎನ್ನಲಾದ ಆಡಿಯವನ್ನು ದೇವರಾಜೇ ಗೌಡರೇ ರಿಲೀಸ್ ಮಾಡಿದ್ದರು. ಇದೀಗ ಮತ್ತೊಂದು ಆಡಿಯೋ ವೈರಲ್ ಆಗುವ ಮೂಲಕ ಪ್ರಕರನವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ