ಬೆಂಗಳೂರು:
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಎಸ್ಐಟಿ ಸಹಾಯವಾಣಿ ತೆರೆದಿದ್ದು, ಈವರೆಗೆ 30ಕ್ಕೂ ಹೆಚ್ಚು ಕರೆ ಗಳು ಬಂದಿವೆ ಎಂದು ಎಸ್ಐಟಿ ಮಾಹಿತಿ ನೀಡಿದೆ.
ದೌರ್ಜನ್ಯ ಪ್ರಕರಣ ಸಂಬಂಧ 30ಕ್ಕೂ ಹೆಚ್ಚು ಕರೆಗಳು ಬಂದಿವೆ. ಆದರೆ ಇದುವರೆಗೂ ಸಂತ್ರಸ್ತೆಯರು ದೂರು ನೀಡಿಲ್ಲ ಎಂದು ಎಸ್ಐಟಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹೆಲ್ಪ್ ಲೈನ್ ಸಂಪರ್ಕಿಸಿ ಮಾಹಿತಿ ನೀಡುವಂತೆ ಎಸ್ಐಟಿ ಮನವಿ ಮಾಡಿದೆ.
6360938947 ನಂಬರ್ ಗೆ ಸಂಪರ್ಕಿಸಿ ದೂರು ನೀಡುವಂತೆ ಎಸ್ಐಟಿ ತಿಳಿಸಿದೆ. ದೂರು ನೀಡಿದರೆ ಮಾಹಿತಿ ಸಂಗ್ರಹಿಸಲು ಸಿದ್ಧರಿದ್ದೇವೆ. ಗುರುತು ಹಾಗೂ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹೆಲ್ಪ್ ಲೈನ್ ಮೂಲಕ ದಾಖಲಾಗಿರುವ ಹೇಳಿಕೆಗಳನ್ನು ಪರಿಗಣಿಸಲಾಗುವುದು. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಪ್ರಕರಣ ದಾಖಲಾಗಿದೆ ಎಂದು ತಿಳಿಸಿದೆ.