ಬೆಂಗಳೂರು:
ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ ಎಂದು ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದ್ದಾರೆ.
ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟದ ವತಿಯಿಂದ ನಗರದ ರೈತ ಸಭಾಂಗಣದಲ್ಲಿ ನಡೆದ ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಂಡ್ಯದ ಮಗ ಯಾರು, ಕಳ್ಳನನ್ನ ಮಗ ಯಾರು ಎಂಬುದನ್ನು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಜನರು ನಿರ್ಧರಿಸುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಾರಿ ತಪ್ಪಿದ ಮಗ ಎಂದು ಟೀಕಿಸಿದರು.
ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳಮಟ್ಟಕ್ಕೆ ಇಳಿದು ಮಾತನಾಡಲು ಇವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ ? ಎಂದು ಪ್ರಶ್ನಿಸಿದ ಅವರು, ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ’ಗಂಡ ಸತ್ತ ಮುಂಡೆ’ ಎಂದು ನಿಂದಿಸಿದ್ದಕ್ಕೆ ಮಂಡ್ಯ ಜಿಲ್ಲೆಯ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.
ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಬಗ್ಗೆ ಕುಮಾರಸ್ವಾಮಿ ಕೆಟ್ಟದಾಗಿ ಮಾತನಾಡಿದ್ದರು. ಆ ಕಾರಣಕ್ಕೆ, ಮಂಡ್ಯದ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಕುಮಾರಸ್ವಾಮಿ ಅದೇ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಮಗ ಯಾರ ಎಂಬುವುದನ್ನು ಮಂಡ್ಯದ ಜನರು ತೀರ್ಮಾನಿಸಬೇಕು ಎಂದು ಹೇಳಿದರು.