ದರ್ಶನ್‌ ಪರ ಮಾತನಾಡಿದವರಿಗೆ ಕ್ಲಾಸ್‌ ತೆಗೆದುಕೊಂಡ್ರ ಪ್ರಶಾಂತ್‌ ಸಂಬರಗಿ….!

ಬೆಂಗಳೂರು:

     ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್​ ಬಗ್ಗೆ ರಾಜ್ಯಾದ್ಯಂತ ಪರ-ವಿರೋಧ ಚರ್ಚೆಯಾಗುತ್ತಿದೆ. ರಾಜ್ಯಾದ್ಯಂತ ದರ್ಶನ್​ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

   ನಟಿ ಹಾಗೂ ಕಾಂಗ್ರೆಸ್​ ನಾಯಕಿ ಭಾವನ, ವಿಜೆ ಹೇಮಲತಾ, ತೆಲುಗು ನಟ ನಾಗಶೌರ್ಯ ಸೇರಿದಂತೆ ಅನೇಕರು ದರ್ಶನ್​ ಪರ ಬ್ಯಾಟ್​ ಬೀಸಿದ್ದಾರೆ. ದರ್ಶನ್​ ಪರ ವಕಾಲತ್ತು ವಹಿಸಿ ಮಾತನಾಡುತ್ತಿರುವವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್​ಬಾಸ್​ ಸೀಸನ್​ 8ರ ಸ್ಪರ್ಧಿ ಪ್ರಶಾಂತ್​ ಸಂಬರಗಿ ತಮ್ಮ ಫೇಸ್​ಬುಕ್​ ಪೇಜ್​ ಮೂಲಕ ಕಿಡಿಕಾರಿದ್ದಾರೆ.

    ದಾಸನ ಅನಾಗರಿಕ, ಅವಿದ್ಯಾವಂತ ಅಭಿಮಾನಿಗಳು ಇವನ ಪೈಶಾಚಿಕ ಕೃತ್ಯವನ್ನು ಸಮರ್ಥನೆ ಮಾಡಿಕೊಂಡರೆ ಪರವಾಗಿಲ್ಲ. ಅವರ ಲೆವೆಲ್ ಇಷ್ಟೇ ಅಂತ ಸುಮ್ಮನಾಗಬಹುದು. ಆದರೆ, ನಮ್ಮ ಎಷ್ಟೋ ವಿದ್ಯಾವಂತ ಬುದ್ಧಿ ಜೀವಿ ನಟ-ನಟಿಯರು ಅವನ ಹೇಯ ಕೃತ್ಯವನ್ನು ಬೆಂಬಲಿಸಿ ಮಾತನಾಡಿದಾಗ ಕೋಪ ಮತ್ತು ಆಶ್ಚರ್ಯ ಒಟ್ಟಿಗೆ ಆಗುತ್ತದೆ. ಇವರುಗಳ ಸಮರ್ಥನೆ ಮತ್ತು ಬೆಂಬಲ ಮಾಡೋದು ನೋಡಿ, ಇವರ ಪ್ರಕಾರ ರೇಣುಕಾಸ್ವಾಮಿ ವಿಕೃತ ಮನಸಿನ ಮನುಷ್ಯ.

    ಆದರೆ, ದಚ್ಚು ಮತ್ತೆ ಅವನ ಪಟಾಲಂ ಗ್ಯಾಂಗ್ ಸೈಕೋ ಕಿಲ್ಲರ್ ಅಲ್ಲ. ಇನ್ನೂ ಸಾವಿರ ಸಲ ಹೇಳುತ್ತೇನೆ ಕೇಳಿ ರೇಣುಕಾಸ್ವಾಮಿ ಮಾಡಿದ್ದು ತಪ್ಪು. ಆದರೆ, ಇಂತಹವರನ್ನು ನೋಡಿಕೊಳ್ಳುವುದಕ್ಕೆ ನ್ಯಾಯಾಲಯ, ಕಾನೂನು ಇದೆ ಮತ್ತು ಪೊಲೀಸ್ ಇಲಾಖೆ ಇದೆ. ಕಾನೂನಿನ ಚೌಕಟ್ಟಿನಲ್ಲಿ ಖಂಡಿತ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು ಕಾನೂನನ್ನೇ ಕೈಗೆ ತೆಗೆದುಕೊಂಡು ಸಾಯಿಸಿ ಮೋರಿಗೆ ಬಿಸಾಡುವುದು ಎಷ್ಟು ಸರಿ ಎಂದು ಪ್ರಶಾಂತ್​ ಸಂಬರಗಿ ಆಕ್ರೋಶ ಹೊರಹಾಕಿದ್ದಾರೆ.

   ನಟ ದರ್ಶನ್​ ಬಂಧನವಾದ ಯಾರೋಬ್ಬರು ಮಾತನಾಡಲಿಲ್ಲ. ಇದೀಗ ಈ ಪ್ರಕರಣದಲ್ಲಿ ದರ್ಶನ್​ ಜೈಲು ಸೇರಿದ ಬಳಿಕ ಒಬ್ಬೊಬ್ಬರೆ ದರ್ಶನ್​ ಬಗ್ಗೆ ಮಾತನಾಡುತ್ತಿದ್ದಾರೆ. ಕೆಲವರು ದರ್ಶನ್​ ಪರ ಧ್ವನಿಗೂಡಿಸಿ ರೇಣುಕಾಸ್ವಾಮಿ ಮಾಡಿದ್ದು ತಪ್ಪು ಎನ್ನುತ್ತಿದ್ದಾರೆ. ಇನ್ನು ಕೆಲವರು ದರ್ಶನ್​ ವಿರುದ್ಧ ಕಿಡಿಕಾರುತ್ತಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಅದನ್ನು ಪೊಲೀಸರಿಗೆ ಹೇಳಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಅಮಾನವೀಯವಾಗಿ ಸಾಯಿಸುವುದು ಸರಿಯಲ್ಲ ಎಂಬ ಅಭಿಪ್ರಾಯಗಳು ಸಹ ಜನರಲ್ಲಿ ಕೇಳಿಬರುತ್ತಿದೆ.

    ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ.

   ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

   ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

   ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap