ಬೆಂಗಳೂರು;
ಬೆಂಗಳೂರಿನ ವಿಜಯನಗರದಲ್ಲಿರುವ ಬಂಟರ ಸಂಘದಲ್ಲಿ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠ, ಕನಕಧಾಮ, ಕೆಲ್ಲೋಡು, ಹೊಸದುರ್ಗಾ, ಬೆಂಗಳೂರು ವಿಭಾಗ ವತಿಯಿಂದ ಪರಮಪೂಜ್ಯ ಶ್ರೀ ಈಶ್ವರಾನಂದ ಸ್ವಾಮೀಜಿ ರವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ” ಪ್ರತಿಭಾ ಪುರಸ್ಕಾರ ” ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಸಮಸ್ತ ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರೂ ಗ್ಯಾರಂಟಿಗಳ ಅಧ್ಯಕ್ಷರಾದ ಎಚ್ಎಮ್ ರೇವಣ್ಣ.
ಈ ವೇಳೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶ್ರೀ ಕ್ಷೇತ್ರ ಕಾಗಿನೆಲೆ ಮಠದ ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು, , ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠ ಶಾಖಾ ಮಠ ತಿಂಥಣಿ ಬ್ರಿಜ್ ಗುಲ್ಬರ್ಗ ವಿಭಾಗದ ಪರಮ ಪೂಜ್ಯ ಶ್ರೀ ಸಿದ್ದರಾಮನಂದ ಪುರಿ ಮಹಾಸ್ವಾಮಿಗಳು,ಕುಂಚಿಟಿಗ ಸಂಸ್ಥಾನ ಶಾಖಾ ಮಠ ಹೊಸದುರ್ಗ ಶ್ರೀ ಶಾಂತವೀರ ಮಹಾಸ್ವಾಮಿಜೀ ರವರು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ನಾಗಲಕ್ಷ್ಮಿ ಚೌದ್ರಿ ರವರು, ಪ್ರಜಾಪ್ರಗತಿ ಮತ್ತು ಪ್ರಗತಿ ಟಿವಿ ಸಂಪಾದಕರಾದ ಎಸ್ ನಾಗಣ್ಣ, ಇನ್ ಸೈಟ್ಸ್ ಐ.ಎ.ಎಸ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ವಿನಯ್ ಕುಮಾರ್ ಜಿ. ಬಿ ರವರು, ಚಿಕ್ಕಮಗಳೂರು ನಗರ ಸಭೆ ಸದಸ್ಯರಾದ ಶ್ರೀ ಮಹೇಶ್ ರವರು, ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಶ್ರೀ
ಸೇರಿದಂತೆ ಹಲವು ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು.
