ಪ್ರತಿಮಾ ಕೊಲೆ ಪ್ರಕರಣ : ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: 

    ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎಂದು ಹೇಳಲಾಗಿದೆ.

    ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಸಂಭದಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ ಎಂದು ಗುರುತಿಸಲಾಗಿದೆ.  ಮೂಲಗಳ ಪ್ರಕಾರ ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅದರಲ್ಲಿ ಕಿರಣ್​ ಎಂಬಾತ ಪ್ರತಿಮಾ ಅವರ ಹಳೆ ಡ್ರೈವರ್​ ಆಗಿದ್ದನು ಎಂಬುದು ತಿಳಿದುಬಂದಿದೆ.

   ಪೊಲೀಸ್ ವಿಚಾರಣೆ ವೇಳೆ ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು ಎಂದು ಹೇಳಲಾಗಿದೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿರಬಹುದು ಎಂದು ಹೇಳಲಾಗಿದ್ದು, ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

   ಬೆಂಗಳೂರಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ ನಲ್ಲಿ ಗಣಿ-ಭೂವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

    ಬೆಂಗಳೂರಿನ  ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರತಿಮಾ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ. ಕಳೆದ ರಾತ್ರಿ ಈ ಕೃತ್ಯ ನಡೆದಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap