ಜಾತಿ ಗಣಿತಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಬಿಜೆಪಿ….!

ಬೆಂಗಳೂರು

   ಕರ್ನಾಟಕ ರಾಜಕೀಯದಲ್ಲಿ ಈಗ ಜಾತಿಯೇ ಅಸ್ತ್ರವಾಗಿದೆ. ಮುಡಾ ಹಗರಣ ಮರೆ ಮಾಚಲು ಜಾತಿಗಣತಿ ಮುನ್ನಲೆಗೆ ತಂದಿದ್ದಾರೆಂದು ಕಾಂಗ್ರೆಸ್ ನಾಯಕರನ್ನು ಆರೋಪಿಸುತ್ತಿದ್ದ ಬಿಜೆಪಿ ಇದೀಗ ಬ್ರಹ್ಮಾಸ್ತ್ರವೊಂದನ್ನ ಪ್ರಯೋಗಿಸಿದೆ. ಜಾತಿಗಣತಿ ವರದಿ ಮಂಡನೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ಒಳ ಮೀಸಲಾತಿಯನ್ನೂ ಜಾರಿ ಮಾಡುವಂತೆ ಒತ್ತಡ ಹಾಕಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

   ಈ ವಿಚಾರವಾಗಿ ಮಂಗಳವಾರ ಸಭೆ ನಡೆಸಿದ್ದ ಬಿಜೆಪಿ ನಾಯಕರು, ಎರಡ್ಮೂರು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಸಲ್ಲಿಸಿಲು ನಿರ್ಧರಿಸಿದ್ದಾರೆ. ಈ ಮೂಲಕ ಜಾತಿಗಣತಿ ಕೈಗೆತ್ತಿಕೊಂಡಿರುವ ಕಾಂಗ್ರೆಸ್ ಪಡೆಯನ್ನ ಜಾತಿವ್ಯೂಹದಲ್ಲಿ ಸಿಲುಕಿಸಲು ಕೌಂಟರ್ ಪ್ಲ್ಯಾನ್ ಮಾಡಿದ್ದಾರೆ.

   ಈ ಮಧ್ಯೆ, ಜಾತಿಗಣತಿ ವರದಿ ತಯಾರಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್, ವರದಿ ಹೇಗೆ ತಯಾರಿಸಿದ್ದಾರೋ ಏನೋ ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲರ ಜೊತೆ ಚರ್ಚಿಸಿ ಕ್ಯಾಬಿನೆಟ್‌ ಮುಂದೆ ತರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap