ಬಾಂಗ್ಲಾದೇಶ ಮಹಿಳಾ ತಂಡದ ಭಾರತ ಪ್ರವಾಸ ಮುಂದೂಡಿಕೆ

ನವದೆಹಲಿ: 

    ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಬಾಂಗ್ಲಾದೇಶ ಮಹಿಳಾ ತಂಡದ  ಸೀಮಿತ ಓವರ್‌ಗಳ ಭಾರತ ಪ್ರವಾಸವನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ , ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ  ಸರಣಿ ಮುಂದೂಡಿಕೆಯ ಪತ್ರವನ್ನು ಸ್ವೀಕರಿಸಿದೆ ಎನ್ನಲಾಗಿದೆ.

    ಹೊಸದಾಗಿ ವಿಶ್ವ ಚಾಂಪಿಯನ್ ಆಗಿರುವ ಭಾರತ ತಂಡವು ಬಾಂಗ್ಲಾದೇಶ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳಲ್ಲಿ ಸೆಣಸಬೇಕಿತ್ತು. ಈ ಏಕದಿನ ಸರಣಿಯು ಎರಡೂ ತಂಡಗಳಿಗೆ ಐಸಿಸಿ ಮಹಿಳಾ ಏಕದಿನ ಚಾಂಪಿಯನ್‌ಶಿಪ್‌ನ ಆರಂಭಿಕ ಪಂದ್ಯವಾಗಿತ್ತು. ಅಕ್ಟೋಬರ್‌ನಲ್ಲಿ ನವಿ ಮುಂಬೈನಲ್ಲಿ ನಡೆದ ಮಹಿಳಾ ವಿಶ್ವಕಪ್‌ನ ಲೀಗ್ ಹಂತದಲ್ಲಿ ಎರಡೂ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಆದರೆ ಪಂದ್ಯ ಮಳೆಯಿಂದಾಗಿ ಅರ್ಧಕ್ಕೆ ರದ್ದುಗೊಂಡಿತ್ತು.

    ಎರಡೂ ದೇಶಗಳ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಗಳು ಸರಣಿ ನಿಗದಿಯಂತೆ ಮುಂದುವರಿಯದಿರಲು ಪ್ರಮುಖ ಅಂಶವಾಗಿರಬಹುದು ಎಂದು ತಿಳಿದುಬಂದಿದೆ. ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮತ್ತು ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು.

    ಭಾರತ ಮತ್ತು ಬಾಂಗ್ಲಾದೇಶ ಸರಣಿ ಮುಂದೂಡಲ್ಪಟ್ಟಿದ್ದು ಇದೇ ಮೊದಲಲ್ಲ. ಆಗಸ್ಟ್ ಆರಂಭದಲ್ಲಿ, ಭಾರತದ ಪುರುಷರ ತಂಡದ ಏಕದಿನ ಸರಣಿಯ ಬಾಂಗ್ಲಾದೇಶ ಪ್ರವಾಸವನ್ನು ಮುಂದೂಡಲಾಗಿತ್ತು. 

    ವಿದ್ಯಾರ್ಥಿಗಳ ದಂಗೆಗೆ ಬೆಚ್ಚಿ ಭಾರತಕ್ಕೆ ಕಳೆದ ವರ್ಷ ಪಲಾಯನ ಮಾಡಿ ಭಾರತಕ್ಕೆ ಬಂದ ಬಾಂಗ್ಲಾದೇಶಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾಗೆ ಬಾಂಗ್ಲಾ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ. ಅವರ ಅವಾಮಿ ಲೀಗ್‌ ನೇತೃತ್ವದ ಸರ್ಕಾರ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ನೇತೃತ್ವದ ದಂಗೆ ಹತ್ತಿಕ್ಕಲು ನರಮೇಧ ನಡೆಸಿದ ಹಾಗೂ ‘ಮಾನವೀಯತೆ ವಿರುದ್ಧದ ಅಪರಾಧ’ ಎಸಗಿದ ಆರೋಪ ಹೊರಿಸಿ ಅವರಿಗೆ ಸಜೆ ನೀಡಲಾಗಿದೆ. 

    ವಿದ್ಯಾರ್ಥಿ ದಂಗೆ ಹತ್ತಿಕ್ಕಿದ ಪ್ರಕರಣದಲ್ಲಿ ಸುಮಾರು 3 ತಿಂಗಳ ಕಾಲ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿದ ನ್ಯಾ। ಮೊಹಮ್ಮದ್‌ ಗೋಲಂ ಮೊರ್ತಜಾ ಮಜುಮ್ದಾರ್‌ ನೇತೃತ್ವದ ತ್ರಿಸದಸ್ಯ ನ್ಯಾಯಮಂಡಳಿ ಸೋಮವಾರ ಹಸೀನಾ ಅನುಪಸ್ಥಿತಿಯಲ್ಲಿ ಈ ತೀರ್ಪು ಪ್ರಕಟಿಸಿದೆ. ಹಸೀನಾ, ಅಸಾದುಜ್ಜಾಮಾನ್‌ ಖಾನ್‌ಗೆ ಮರಣದಂಡನೆ ವಿಧಿಸಿದ್ದಷ್ಟೇ ಅಲ್ಲದೆ, ಅವರ ಆಸ್ತಿಗಳನ್ನೂ ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಸರ್ಕಾರಕ್ಕೆ ನ್ಯಾಯಾಧಿಕರಣ ನಿರ್ದೇಶನ ನೀಡಿದೆ. ಸದ್ಯ ಹಸೀನಾ ಭಾರತದಲ್ಲಿ ಅಘೋಷಿತ ರಾಜಾಶ್ರಯದಲ್ಲಿದ್ದಾರೆ.

   ಇದು ಸಂಪೂರ್ಣ ಪಕ್ಷಪಾತಿ ಹಾಗೂ ರಾಜಕೀಯಪ್ರೇರಿತ ತೀರ್ಪು. ವಿಚಾರಣೆಯನ್ನು ನನ್ನ ಅನುಪಸ್ಥಿತಿಯಲ್ಲಿ ನಡೆಸಲಾಗಿದೆ. ನ್ಯಾಯೋಚಿತವಾಗಿ ನನಗೆ ವಾದಕ್ಕೆ ಅ‍ವಕಾಶ ನೀಡಿಲ್ಲ. ನ್ಯಾಯಾಧೀಶರು ಮತ್ತು ವಕೀಲರು ಹಾಲಿ ಸರ್ಕಾರದ ಪರ ಬಹಿರಂಗವಾಗಿಯೇ ಸಹಾನುಭೂತಿ ವ್ಯಕ್ತಪಡಿಸಿದರು. ನಿಜವಾಗಿಯೂ ನ್ಯಾಯ ಒದಗಿಸುವ ಉದ್ದೇಶ ಅವರಿಗೆ ಇಲ್ಲ ಎಂದು ಶೇಖ್ ಹಸೀನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Recent Articles

spot_img

Related Stories

Share via
Copy link