ಮಂಗಳೂರು:
ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.
ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.
ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು.
ಅಲ್ಲದೆ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
