ನೆಲಮಂಗಲ : ಟಿಪ್ಪರ್‌ ಗುದ್ದಿ ಗರ್ಭಿಣಿ ಸಾವು…!

ನೆಲಮಂಗಲ

    ಬೆಂಗಳೂರು ಗ್ರಾಮಾಂತರ  ಜಿಲ್ಲೆ ನೆಲಮಂಗಲ  ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ  ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಹಿಂಬದಿ ಕುಳಿತಿದ್ದ ಗರ್ಭಿಣಿ  ಮೃತಪಟ್ಟಿದ್ದಾರೆ. ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಗಡೆ ಬಂದು ವಿಲ ವಿಲ ಒದ್ದಾಡಿ ಸಾವನ್ನಪ್ಪಿದೆ. ಎಡೇಹಳ್ಳಿಯ ಸಿಂಚನಾ ಮೃತದುರ್ದೈವಿ. ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ​ಪಾರಾಗಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
    ಬಳಿಕ ಟಿಪ್ಪರ್ ​ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ. ಮನಕಲಕುವ ಘಟನೆ ಕಂಡು ಸ್ಥಳೀಯರು ಕೂಡ ಕಣ್ಣೀರು ಹಾಕಿದ್ದಾರೆ.ಮೃತ ದೇಹದ ಮುಂದೆ ಪತಿ ಮಂಜುನಾಥ್​​ ಹಾಗೂ ಅತ್ತೆಯ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹದ ರವಾನೆ ಮಾಡಲಾಗಿದೆ.
    ಘಟನೆ ಸಂಬಂಧ ಮೃತ ಸಿಂಚನಾ ಪತಿ ಮಂಜುನಾಥ ಮಾತನಾಡಿ, ಶಿವಗಂಗೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ದಾಬಸ್​ಪೇಟೆ ಮುಖಾಂತರ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಎಡೆಹಳ್ಳಿ ಮುಖಾಂತರವಾಗಿ ತೋಟನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದೇವು. ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಲಾರಿ ನಾವಿದ್ದ ಬೈಕಿಗೆ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದಾಗ ಸಿಂಚನಾ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೊಟ್ಟೆಯಿಂದ ಮಗು ಆಚೆ ಬಂದಿದೆ ಈ ದೃಶ್ಯ ನೋಡಲು ನನ್ನಿಂದ ಸಾಧ್ಯವಿಲ್ಲ ಎಂದು ಗೋಳಾಡಿದ್ದಾರೆ.
    ಕಳೆದ ಆರು ತಿಂಗಳಲ್ಲಿ ನೆಲಮಂಗಲ ಸಾಂಚಾರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತ ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

Recent Articles

spot_img

Related Stories

Share via
Copy link
Powered by Social Snap