ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ…..!

ಮೈಸೂರು:

    ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ  ಆಗಮಿಸಲಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎ‌ಸ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ.

    ಇದು ರಾಷ್ಟ್ರಪತಿಗಳು ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ. ಅವರು 2022 ರ ಸೆಪ್ಟೆಂಬರ್ 26 ರಂದು ನಾಡಹಬ್ಬ ದಸರಾವನ್ನು ಉದ್ಘಾಟಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಆಗಮಿಸಲಿದ್ದು, ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಪೂರ್ವಭಾವಿ ಸಭೆ ನಡೆಸಿದರು. ಅವರ ಭೇಟಿಯ ಸಮಯದಲ್ಲಿ ಭದ್ರತಾ ಲೋಪಗಳು ಇರಬಾರದು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.‌

Recent Articles

spot_img

Related Stories

Share via
Copy link